ನವದೆಹಲಿ: ರಾಷ್ಟ್ರ ರಾಜಧಾನಿಯ ಈಶಾನ್ಯ ಜಿಲ್ಲೆಯಲ್ಲಿ ಕಳೆದ ತಿಂಗಳು ನಡೆದಿದ್ದ ಗಲಭೆಯಲ್ಲಿ ಐಬಿ ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಐಬಿ ಅಧಿಕಾರಿ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ - ನವದೆಹಲಿ ಹಿಂಸಾಚಾರ ಲೇಟೆಸ್ಟ್ ನ್ಯೂನ್
ದೆಹಲಿಯಲ್ಲಿ ನಡೆದ ಹಿಂಸಾಚಾರದ ವೇಳೆ ಗುಪ್ತಚರ ಇಲಾಖೆ ಅಧಿಕಾರಿ ಹತ್ಯೆ ಸಂಬಂಧ ಮತ್ತೋರ್ವ ಆರೋಪಿಯನ್ನು ದೆಹಲಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಮತ್ತೋರ್ವ ಆರೋಪಿಯ ಬಂಧನ
ಆರೋಪಿಯನ್ನು ಸಲ್ಮಾನ್ ಅಲಿಯಾಸ್ ನಾನ್ಹೆ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಾಪತ್ತೆಯಾದ ಒಂದು ದಿನದ ನಂತರ ಫೆಬ್ರವರಿ 27 ರಂದು ಈಶಾನ್ಯ ದೆಹಲಿಯ ಚಾಂದ್ ಬಾಗ್ ಪ್ರದೇಶದ ಮನೆಯ ಸಮೀಪವಿರುವ ಚರಂಡಿಯಲ್ಲಿ ಶರ್ಮಾ ಅವರ ಮೃತದೇಹ ಪತ್ತೆಯಾಗಿತ್ತು.
ಈದೇ ಪ್ರಕರಣ ಸಂಬಂಧ ಅಮಾನತುಗೊಂಡ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ತಾಹೀರ್ ಹುಸೇನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.