ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರವನ್ನು ನಿಯಂತ್ರಿಸಲು ಪೊಲೀಸ್ ಇಲಾಖೆಗೆ ಸಾಧ್ಯವಾಗುತ್ತಿಲ್ಲ. ಜನರಲ್ಲಿ ವಿಶ್ವಾಸ ಮೂಡಿಸುವ ಸಲುವಾಗಿ ಗೃಹ ಸಚಿವ ಅಮಿತ್ ಶಾ ಸೈನ್ಯವನ್ನ ನಿಯೋಜಿಸಬೇಕು ಎಂದು ಕೇಜ್ರಿವಾಲ್ ಮನವಿ ಮಾಡಿದ್ದಾರೆ.
ಪೊಲೀಸರಿಂದ ಹಿಂಸಾಚಾರ ನಿಯಂತ್ರಿಸಲಾಗ್ತಿಲ್ಲ.. ಆರ್ಮಿ ಬೇಕೆಂದ ದೆಹಲಿ ಸಿಎಂ - ಸೇನೆ ಕಳುಹಿಸಿ ಕೊಡುವಂತೆ ಕೇಜ್ರಿವಾಲ್ ಪತ್ರ
ನಾನು ರಾತ್ರಿ ಪೂರ್ತಿ ಜನರ ಜೊತೆ ಸಂಪರ್ಕದಲ್ಲಿದ್ದೆ. ಪರಿಸ್ಥಿತಿ ಆತಂಕಕಾರಿಯಾಗಿದೆ. ಪೊಲೀಸರ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಆತ್ಮವಿಶ್ವಾಸವನ್ನು ತುಂಬಲು ಸಾಧ್ಯವಾಗಲಿಲ್ಲ ಎಂದಿದ್ದಾರೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್.
ಆರ್ಮಿ ಬೇಕೆಂದ ದೆಹಲಿ ಸಿಎಂ ಕೇಜ್ರಿವಾಲ್
ನಾನು ರಾತ್ರಿ ಪೂರ್ತಿ ಜನರ ಜೊತೆ ಸಂಪರ್ಕದಲ್ಲಿದ್ದೆ. ಪರಿಸ್ಥಿತಿ ಆತಂಕಕಾರಿಯಾಗಿದೆ. ಪೊಲೀಸರ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಆತ್ಮವಿಶ್ವಾಸವನ್ನು ತುಂಬಲು ಸಾಧ್ಯವಾಗಲಿಲ್ಲ ಎಂದಿದ್ದಾರೆ.
ಅಲ್ಲದೆ ದೆಹಲಿಯಲ್ಲಿನ ಹಿಂಸಾಚಾರ ನಿಯಂತ್ರಿಸಲು ಸೇನೆ ಕಳುಹಿಸಬೇಕು ಮತ್ತು ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ತಕ್ಷಣ ಕರ್ಫ್ಯೂ ವಿಧಿಸಬೇಕು ಎಂದು ಕೇಜ್ರಿವಾಲ್ ಟ್ವೀಟ್ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆಯುವುದಾಗಿಯೂ ಅವರು ಹೇಳಿದ್ದಾರೆ.