ನವದೆಹಲಿ:ಹಿಂಸಾಚಾರದಲ್ಲಿ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ಮತ್ತು ಸುರಕ್ಷಿತ ಮಾರ್ಗಗಳನ್ನು ಖಚಿತಪಡಿಸಿಕೊಳ್ಳಿ ಎಂದು ದೆಹಲಿ ಹೈಕೋರ್ಟ್ ಪೊಲೀಸರಿಗೆ ನಿರ್ದೇಶನ ನೀಡಿದೆ.
ದೆಹಲಿ ಹಿಂಸಾಚಾರ ಅರ್ಜಿ ವಿಚಾರಣೆ: ಪೊಲೀಸ್ ಇಲಾಖೆಗೆ ಹೈಕೋರ್ಟ್ ನೋಟಿಸ್ - ದೆಹಲಿ ಹೈಕೋರ್ಟ್ ನೊಟೀಸ್
ಹಿಂಸಾಚಾರದಲ್ಲಿ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ಮತ್ತು ಸುರಕ್ಷಿತ ಮಾರ್ಗಗಳನ್ನು ಖಚಿತಪಡಿಸಿಕೊಳ್ಳಿ ಎಂದು ದೆಹಲಿ ಹೈಕೋರ್ಟ್ ಪೊಲೀಸರಿಗೆ ನಿರ್ದೇಶನ ನೀಡಿದೆ.
ಸುರಕ್ಷತೆ ಕೋರಿ ತುರ್ತು ಮನವಿಯ ಮೇರೆಗೆ ಮಧ್ಯರಾತ್ರಿ ನ್ಯಾಯಮೂರ್ತಿ ಎಸ್.ಮುರಳೀಧರ್ ಅವರ ನಿವಾಸದಲ್ಲಿ ವಿಚಾರಣೆ ನಡೆಯಿತು. ಗಾಯಾಳುಗಳಿಗೆ ಸಾಕಷ್ಟು ಸೌಲಭ್ಯಗಳನ್ನು ಹೊಂದಿರುವ ವೈದ್ಯಕೀಯ ಆಸ್ಪತ್ರೆಗೆ ಸಾಗಿಸುವುದು. ಗಾಯಗೊಂಡವರ ಬಗ್ಗೆ ಮಾಹಿತಿ ಮತ್ತು ಅವರಿಗೆ ನೀಡಲಾಗುವ ಚಿಕಿತ್ಸೆ ಬಗ್ಗೆ ವರದಿ ನೀಡುವಂತೆ ಎಸ್.ಮುರಳೀಧರ್ ಮತ್ತು ಅನುಪ್ ಜೆ. ಭಂಭಾನಿ ಅವರ ನ್ಯಾಯಪೀಠ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದೆ.
ಈ ಸಂಬಂಧ ಮಧ್ಯಾಹ್ನ 2.15ಕ್ಕೆ ವಿಚಾರಣೆ ನಡೆಯಲಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಿದೆ. ರಾಷ್ಟ್ರ ರಾಜಧಾನಿಯಲ್ಲಿ ನಡೆದ ಹಿಂಸಾಚಾರಕ್ಕೆ ಇಲ್ಲಿಯವರೆಗೆ 20 ಜನ ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ.