ಮುಂಬೈ:ನ.23 ರಂದು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಹಾಗೂ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಇದೀಗ ಬಹುಮತ ಸಾಬೀತಿಗೂ ಮುನ್ನವೇ ಇವರಿಬ್ಬರು ರಾಜೀನಾಮೆ ಘೋಷಣೆ ಮಾಡಿದ್ದಾರೆ.
ನಾವು ಪ್ರತಿಪಕ್ಷದ ಸ್ಥಾನದಲ್ಲಿ ನಿಂತು ಕೆಲಸ ಮಾಡುತ್ತೇವೆ: ದೇವೇಂದ್ರ ಫಡ್ನವೀಸ್ - ದೇವೇಂದ್ರ ಫಡ್ನವೀಸ್ ಸುದ್ದಿಗೋಷ್ಠಿ
ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ದೇವೇಂದ್ರ ಫಡ್ನವೀಸ್, ನಮ್ಮ ಬಳಿ ಸರ್ಕಾರ ರಚನೆಗೆ ಅಗತ್ಯ ಬಹುಮತ ಇಲ್ಲ. ಹೀಗಾಗಿ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆ. ನಾವು ಪ್ರತಿಪಕ್ಷದ ಸ್ಥಾನದಲ್ಲಿ ನಿಂತು ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
![ನಾವು ಪ್ರತಿಪಕ್ಷದ ಸ್ಥಾನದಲ್ಲಿ ನಿಂತು ಕೆಲಸ ಮಾಡುತ್ತೇವೆ: ದೇವೇಂದ್ರ ಫಡ್ನವೀಸ್ Devendra Fadnavis press meet](https://etvbharatimages.akamaized.net/etvbharat/prod-images/768-512-5182167-thumbnail-3x2-megha.jpg)
ದೇವೇಂದ್ರ ಫಡ್ನವೀಸ್
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ದೇವೇಂದ್ರ ಫಡ್ನವೀಸ್, ನಮ್ಮ ಬಳಿ ಸರ್ಕಾರ ರಚನೆಗೆ ಅಗತ್ಯ ಬಹುಮತ ಇಲ್ಲ. ಹೀಗಾಗಿ ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿದ್ದೇನೆ. ನಾವು ಪ್ರತಿಪಕ್ಷದ ಸ್ಥಾನದಲ್ಲಿ ನಿಂತು ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಈ ಮೂರು ಚಕ್ರದ ಮೈತ್ರಿ ಸರ್ಕಾರ ಸ್ಥಿರವಾಗಿರುತ್ತದೆ ಎಂಬ ನಂಬಿಕೆಯಿಲ್ಲ. ಆದರೆ ಬಿಜೆಪಿ ಪ್ರತಿಪಕ್ಷದ ಸ್ಥಾನದಲ್ಲಿ ನಿಂತು ಜನರ ದನಿಯನ್ನ ಎತ್ತುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.