ನಾಗ್ಪುರ್: ಮತ್ತೊಮ್ಮೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ನಾಗ್ಪುರ್ನಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಮತ್ತೆ ದೇವೇಂದ್ರ ಫಡ್ನವೀಸ್ ಸಿಎಂ: ಕುಣಿದು ಕುಪ್ಪಳಿಸಿದ ಬಿಜೆಪಿ ಕಾರ್ಯಕರ್ತರು - ನಾಗ್ಪುರ್ನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ
ದೇವೇಂದ್ರ ಫಡ್ನವೀಸ್ ಮತ್ತೆ ಸಿಎಂ ಆಗಿರುವುದು ಬಿಜೆಪಿ ಕಾರ್ಯಕರ್ತರು ಸಂತೋಷದಲ್ಲಿ ತೇಲಾಡುವಂತೆ ಮಾಡಿದ್ದು, ನಾಗ್ಪುರ್ನಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು
ಬಿಜೆಪಿ ಮಹಿಳಾ ಕಾರ್ಯಕರ್ತರು ಸಹ ರಸ್ತೆ ಮಧ್ಯೆ ಕುಣಿದು ಕುಪ್ಪಳಿಸಿದ್ದಾರೆ. ನಿರೀಕ್ಷೆಗೂ ಮೀರಿದ ರೀತಿಯಲ್ಲಿ ದೇವೇಂದ್ರ ಫಡ್ನವೀಸ್ ಮತ್ತೆ ಸಿಎಂ ಆಗಿರುವುದು ಬಿಜೆಪಿ ಕಾರ್ಯಕರ್ತರು ಸಂತೋಷದಲ್ಲಿ ತೇಲಾಡುವಂತೆ ಮಾಡಿದೆ. ಪಟಾಕಿ ಸಿಡಿಸಿ, ಬಿಜೆಪಿ ಬಾವುಟ ಹಾರಿಸುತ್ತಾ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.