ಕರ್ನಾಟಕ

karnataka

ETV Bharat / bharat

370ನೇ ವಿಧಿ ರದ್ದುಗೊಂಡ ಬಳಿಕ ಜಮ್ಮು-ಕಾಶ್ಮೀರದ ಅಭಿವೃದ್ಧಿಯ ಸ್ಥಿತಿ-ಗತಿ ಹೇಗಿದೆ? - ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ಆಗಸ್ಟ್ 5ರ ಪೂರ್ವದ ಸ್ಥಿತಿಯನ್ನು ಪುನಾಃ ಸ್ಥಾಪಿಸಲು ಒತ್ತಾಯಿಸುತ್ತಿರುವ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ, 370ನೇ ವಿಧಿ ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರವು "ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಸೂಚಿಯನ್ನು ಈಡೇರಿಸಿದೆ". ಆದರೆ, ಯಾವುದೇ ಅಭಿವೃದ್ಧಿ ಮಾತ್ರ ಆಗಿಲ್ಲ ಎಂದು ಹೇಳಿದೆ.

ಜಮ್ಮು-ಕಾಶ್ಮೀರದ ಅಭಿವೃದ್ಧಿಯ ಸ್ಥಿತಿ-ಗತಿ
ಜಮ್ಮು-ಕಾಶ್ಮೀರದ ಅಭಿವೃದ್ಧಿಯ ಸ್ಥಿತಿ-ಗತಿ

By

Published : Aug 5, 2020, 5:51 AM IST

ಶ್ರೀನಗರ :ಕೇಂದ್ರ ಸರ್ಕಾರ 2019ರಲ್ಲಿ 370ನೇ ವಿಧಿ ರದ್ದುಪಡಿಸಲು ಕಾಶ್ಮೀರದಲ್ಲಿ ಹೇರಿದ ಲಾಕ್​ಡೌನ್​ ಹಾಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಎರಡು ಪ್ರತ್ಯೇಕ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿರುವುದು ಆರ್ಥಿಕ ಮತ್ತು ಅಭಿವೃದ್ಧಿ ಬಿಕ್ಕಟ್ಟುಗಳಿಗೆ ಕಾರಣವಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ಜಮ್ಮು-ಕಾಶ್ಮೀರದ ಅಭಿವೃದ್ಧಿಯ ಸ್ಥಿತಿ-ಗತಿ

ಬಿಜೆಪಿ ಸರ್ಕಾರದ ಏಕಪಕ್ಷೀಯ ನಿರ್ಧಾರವನ್ನು ಜಮ್ಮು ಮತ್ತು ಕಾಶ್ಮೀರದ ರಾಜಕೀಯ ಪಕ್ಷಗಳು ತೀವ್ರವಾಗಿ ವಿರೋಧಿಸಿವೆ. ಒಂದು ವರ್ಷದ ನಂತರ, 370ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕ ಆದ ಅಭಿವೃದ್ಧಿಯ ಬಗ್ಗೆ ಪ್ರಶ್ನಿಸಿದ್ದಾರೆ.

ಆರ್ಥಿಕ ಸೂಚಕ

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ಆಗಸ್ಟ್ 5ರ ಪೂರ್ವದ ಸ್ಥಿತಿಯನ್ನು ಪುನಾಃ ಸ್ಥಾಪಿಸಲು ಒತ್ತಾಯಿಸುತ್ತಿರುವ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ, 370ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರವು "ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಸೂಚಿ ಈಡೇರಿಸಿದೆ". ಆದರೆ, ಯಾವುದೇ ಅಭಿವೃದ್ಧಿ ಮಾತ್ರ ಆಗಿಲ್ಲ ಎಂದು ಹೇಳಿದೆ.

ಬಂಡವಾಳ ಹೂಡಿಕೆ

ಜಮ್ಮು ಮತ್ತು ಕಾಶ್ಮೀರ ಅಭಿವೃದ್ಧಿಗೆ ಸಾಕ್ಷಿಯಾಗಲಿದೆ ಎಂದು ಬಿಜೆಪಿ ಸರ್ಕಾರವು 370ನೇ ವಿಧಿಯನ್ನು ರದ್ದುಪಡಿಸಿತು. ಆದರೆ, ನಂತರದಲ್ಲಿ, ನಾವು ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಕಾರ್ಯಸೂಚಿಯನ್ನು ಮಾತ್ರ ಈಡೇರಿಸಿದ್ದೇವೆ. ನಿರುದ್ಯೋಗ ಹೆಚ್ಚಾಗಿದೆ, ಆರ್ಥಿಕತೆಯು ಕುಂಠಿತಗೊಂಡಿದೆ. ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿ ಹದಗೆಟ್ಟಿದೆ ಎಂದು ಶ್ರೀನಗರದ ಪಿಡಿಪಿ ನಾಯಕ ರೂಫ್‌ದಾರ್ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ಅಭಿವೃದ್ಧಿಯ ಸ್ಥಿತಿ-ಗತಿ

ಆರ್ಥಿಕ ಮತ್ತು ಅಭಿವೃದ್ಧಿ ವಿಶ್ಲೇಷಕ ಇಜಾಜ್ ಅಯೌಬ್, 2019 ಆಗಸ್ಟ್ 5ರ ನಂತರ ಹೇರಿದ ಕಾನೂನುಗಳು ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿ ಮತ್ತು ಆರ್ಥಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಲು ಕಾರಣವಾದವು. ಇದು ಕೋವಿಡ್-19 ಲಾಕ್‌ಡೌನ್‌ನಿಂದ ಮತ್ತಷ್ಟು ಉಲ್ಬಣಗೊಂಡಿದೆ. ಜಮ್ಮು ಮತ್ತು ಕಾಶ್ಮೀರದ ಆರ್ಥಿಕತೆಗೆ 40-45 ಸಾವಿರ ಕೋಟಿ ನಷ್ಟ ಉಂಟಾಗಿದೆ. ಇದರಿಂದಾಗಿ ಉದ್ಯೋಗ ನಷ್ಟ ಸಂಭವಿಸಿದೆ ಎಂದು ಹೇಳಿದರು.

ಜಮ್ಮು-ಕಾಶ್ಮೀರದ ಅಭಿವೃದ್ಧಿಯ ಸ್ಥಿತಿ-ಗತಿ

ಜಮ್ಮು ಮತ್ತು ಕಾಶ್ಮೀರದ ಆರ್ಥಿಕತೆಯು ಕುಂಠಿತಗೊಂಡಿದೆ. ಜೆಕೆಯ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ)-20ರಷ್ಟಾಗಿದೆ. ಭಾರತೀಯ ಆರ್ಥಿಕತೆಯ ಮೇಲ್ವಿಚಾರಣಾ ಕೇಂದ್ರದ ಪ್ರಕಾರ ನಿರುದ್ಯೋಗ ದರವು ಶೇ.22ಕ್ಕಿಂತ ಹೆಚ್ಚಾಗಿದೆ. ಯಾವುದೇ ಹೂಡಿಕೆ ಬಂದಿಲ್ಲ ಎಂದರು.

ಹೂಡಿಕೆಗಾಗಿ, ರಾಜಕೀಯ ಸ್ಥಿರತೆ ಮತ್ತು ಮೂಲಸೌಕರ್ಯ ಲಾಜಿಸ್ಟಿಕ್ಸ್ ಇರಬೇಕು. 370ನೇ ವಿಧಿಯನ್ನು ರದ್ದುಗೊಳಿಸುವುದರಿಂದ ರಾಜಕೀಯ ಸ್ಥಿರತೆ ಇಲ್ಲದಿದ್ದರೆ ಆರ್ಥಿಕ ಸ್ಥಿರತೆ ಅಥವಾ ಹೂಡಿಕೆಯನ್ನು ತರುವುದು ಕಷ್ಟಸಾಧ್ಯ ಎಂದು ಅಭಿಪ್ರಾಯಪಟ್ಟರು.

ABOUT THE AUTHOR

...view details