ಉಜ್ಜಯಿನಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿರುವ ಬಿಜೆಪಿ ಪಕ್ಷವನ್ನು ಮಧ್ಯಪ್ರದೇಶ ಮಾಜಿ ಸಿಎಂ ದಿಗ್ವಿಜಯ ಸಿಂಗ್ ಟೀಕಿಸಿದ್ದಾರೆ.
ಉಜ್ಜಯಿನಿ ಜಿಲ್ಲೆಯ ನಾಗ್ಡಾದಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಬಿಜೆಪಿ ಯಾರ ಅನುಮತಿಯೊಂದಿಗೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿದೆ. ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಿಸಲು ಟ್ರಸ್ಟ್ ಬಿಜೆಪಿಗೆ ಅಧಿಕಾರ ನೀಡಿದೆಯೇ? ಎಂದು ಪ್ರಶ್ನಿಸಿದರು.
ಕೇಸರಿ ಪಕ್ಷವು ರ್ಯಾಲಿಗಳ ಮೂಲಕ ದೇವಾಲಯಕ್ಕೆ ದೇಣಿಗೆ ಸಂಗ್ರಹಿಸುತ್ತಿದೆ. ಅದರಲ್ಲಿ ಅವರು ಲಾಠಿ ಮತ್ತು ಕತ್ತಿಗಳನ್ನು ಸಾಗಿಸುತ್ತಿದ್ದಾರೆ ಎಂದು ಆರೋಪಿಸಿದರು.