ಕೋಲ್ಕತ್ತಾ:ಬರೋಬ್ಬರಿ 10 ಕೋಟಿ ರೂ ಮೌಲ್ಯದ 25.79 ಕೆಜಿ ಚಿನ್ನ ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ ಮಾಡುವಲ್ಲಿ ಇಲ್ಲಿನ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
10 ಕೋಟಿ ಮೌಲ್ಯದ 25.79 ಕೆಜಿ ಚಿನ್ನ ಸಾಗಣೆ.. ಇಬ್ಬರು ಆರೋಪಿಗಳ ಬಂಧನ - ಇಬ್ಬರು ಆರೋಪಿಗಳ ಬಂಧನ
ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಚಿನ್ನ ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ಅಕ್ರಮ ಚಿನ್ನ ಸಾಗಿಸುತ್ತಿದ್ಧ ಆರೋಪಿಗಳ ಬಂಧನ
ಪಶ್ಚಿಮ ಬಂಗಾಳದ ಸಿಲಿಗುರಿ ನಗರದಲ್ಲಿ ಡಿಆರ್ಐ ಅಧಿಕಾರಿಗಳು ಆರೋಪಿಗಳನ್ನ ವಶಕ್ಕೆ ಪಡೆದುಕೊಂಡಿದ್ದು, ಅವರಿಂದ ಚಿನ್ನ ವಶಕ್ಕೆ ಪಡೆದುಕೊಂಡು ಇದೀಗ ವಿಚಾರಣೆಗಾಗಿ ಕೋರ್ಟ್ಗೆ ಹಾಜರು ಪಡಿಸಿದ್ದಾರೆ.
ಈ ಹಿಂದೆ ಕೂಡ ಅಕ್ರಮವಾಗಿ ಚಿನ್ನವನ್ನ ಸಾಗಣೆ ಮಾಡುತ್ತಿದ್ದ ಆರೋಪಿಗಳನ್ನ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು. ಆ ವೇಳೆ 2.5 ಕೋಟಿ ರೂ ಮೌಲ್ಯದ 6 ಕೆಜಿ ಚಿನ್ನ ವಶಕ್ಕೆ ಪಡೆದುಕೊಂಡಿದ್ದರು.