ಬೆಂಗಳೂರು/ನವದೆಹಲಿ: ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ನ್ಯಾಯಾಂಗ ಬಂಧನದಲ್ಲಿದ್ದ ಕಾಂಗ್ರೆಸ್ನ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ದೆಹಲಿ ಹೈಕೋರ್ಟ್ನಿಂದ ಜಾಮೀನು ಪಡೆದಿದ್ದರು. ಈ ಕುರಿತು ಇಡಿ ಅಧಿಕಾರಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇಂದು ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಲಿದೆ.
ಡಿಕೆಶಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಂದು ಸುಪ್ರೀಂನಲ್ಲಿ ಇಡಿ ಮೇಲ್ಮನವಿ ಅರ್ಜಿ ವಿಚಾರಣೆ - money laundering case
ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ನ್ಯಾಯಾಂಗ ಬಂಧನದಲ್ಲಿದ್ದ ಕಾಂಗ್ರೆಸ್ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ದೆಹಲಿ ಹೈಕೋರ್ಟ್ನಿಂದ ಜಾಮೀನು ಪಡೆದಿದ್ದರು. ಈ ಕುರಿತು ಇಡಿ ಅಧಿಕಾರಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇಂದು ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಲಿದೆ.
ಡಿಕೆಶಿ
ಮನಿ ಲಾಂಡರಿಂಗ್ ಪ್ರಕರಣದಲ್ಲಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಇಡಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಇಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾ ಮಾಡುವಂತೆ ಡಿ.ಕೆ. ಶಿವಕುಮಾರ್ ಸಹ ಅರ್ಜಿ ಸಲ್ಲಿಸಿದ್ದರು.
ಈ ಎರಡು ಅರ್ಜಿಗಳ ವಿಚಾರಣೆ ಇಂದು ಸುಪ್ರೀಂಕೋರ್ಟ್ನ ನ್ಯಾ.ಆರ್.ಎಫ್.ನಾರಿಮನ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ನಡೆಯಲಿದೆ.