ಚೆನ್ನೈ:ನಟ, ರಾಜಕಾರಣಿ ಡಿಎಂಡಿಕೆ ಪಕ್ಷದ ಅಧ್ಯಕ್ಷ ವಿಜಯಕಾಂತ್ಗೆ ಕೊರೊನಾ ಸೋಂಕು ಧೃಢಪಟ್ಟಿದ್ದು, ಚೆನ್ನೈನ ಎಂಐಒಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ಡಿಎಂಡಿಕೆ ಪಕ್ಷದ ಅಧ್ಯಕ್ಷ ವಿಜಯಕಾಂತ್ಗೆ ಕೊರೊನಾ ಪಾಸಿಟಿವ್ - Corona infection to actor vijayakanth
ಡಿಎಂಡಿಕೆ ಪಕ್ಷದ ಅಧ್ಯಕ್ಷ ವಿಜಯಕಾಂತ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಸ್ಪತ್ರೆ ಮೂಲಗಳ ಪ್ರಕಾರ, ವಿಜಯಕಾಂತ್ ಆರೋಗ್ಯ ಸ್ಥಿರವಾಗಿದೆ. ಸಂಪೂರ್ಣ ಚೇತರಿಸಿಕೊಂಡ ಬಳಿಕ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ. ಸೆ. 23 ರಂದು ( ನಿನ್ನೆ) ವಿಜಯಕಾಂತ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಎಂಐಒಟಿ ಆಸ್ಪತ್ರೆಗೆ ದಾಖಲಾಗಿದ್ದರು.
ಪಕ್ಷದ ಮೂಲಗಳ ಮಾಹಿತಿ ಪ್ರಕಾರ, ವಿಜಯಕಾಂತ್ ಅವರು ಆರು ತಿಂಗಳಿಗೊಮ್ಮೆ ಸಾಮಾನ್ಯ ಆರೋಗ್ಯ ತಪಾಸಣೆಗೆ ಒಳಪಡುತ್ತಾರೆ. ಈ ಬಾರಿ ತಪಾಸಣೆಗೆ ತೆರಳಿದ ವೇಳೆ ಕೊರೊನಾದ ಲಘು ಲಕ್ಷಣಗಳು ಕಂಡು ಬಂದಿತ್ತು. ಹೀಗಾಗಿ ಅವರು ಕೊರೊನಾ ಪರೀಕ್ಷೆ ಮಾಡಿಸಿದ್ದರು. ವರದಿಯಲ್ಲಿ ಕೊರೊನಾ ಪಾಟಿಸಿವ್ ಬಂದಿತ್ತು. ಚಿಕಿತ್ಸೆಯ ಬಳಿಕ ಅವರ ಆರೋಗ್ಯ ಸುಧಾರಿಸಿದೆ ಎಂದು ತಿಳಿದು ಬಂದಿದೆ.