ತಮಿಳುನಾಡು :ದೆಹಲಿ ಗಡಿಯಲ್ಲಿ ರೈತರ ಚಳವಳಿ ಮುಂದುವರಿದಿದೆ. ಈ ಮಧ್ಯೆ ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ನಿರ್ಣಯವನ್ನು ತರಲು ವಿಶೇಷ ವಿಧಾನಸಭಾ ಅಧಿವೇಶನ ಕರೆಯುವಂತೆ ಕೋರಿ ಡಿಎಂಕೆ ಮುಖ್ಯಸ್ಥ ಎಂ ಕೆ ಸ್ಟಾಲಿನ್ ತಮಿಳುನಾಡು ಸಿಎಂ ಕೆ ಪಳನಿಸ್ವಾಮಿಗೆ ಅವರಿಗೆ ಪತ್ರ ಬರೆದಿದ್ದಾರೆ.
ಈವರೆಗೆ ದೆಹಲಿ, ಕೇರಳ, ರಾಜಸ್ಥಾನ, ಪಂಜಾಬ್, ಚಂಡೀಗಢ ಸೇರಿ 5 ರಾಜ್ಯಗಳು ಕೇಂದ್ರದ ಕೃಷಿ ಮಸೂದೆಗಳ ವಿರುದ್ಧ ನಿರ್ಣಯ ಅಂಗೀಕರಿಸಿವೆ. ಆದರೆ, 2020ರಲ್ಲಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ನೂತನ ಕೃಷಿ ಕಾಯ್ದೆಗಳನ್ನ ಹಿಂಪಡೆಯುವಂತೆ ಈಗಾಗಲೇ ಸಿಂಘು ಗಡಿಯಲ್ಲಿ ಸಾವಿರಾರು ರೈತರು ಪ್ರತಿಭಟಿಸುತ್ತಿದ್ದಾರೆ.