ನವದೆಹಲಿ: ಜೆಎನ್‌ಯು ಕ್ಯಾಂಪಸ್ನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಖಂಡಿಸಿ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾಗ ಕ್ಯಾಂಪಸ್‌ಗೆ ಆಗಮಿಸಿ ಬೆಂಬಲ ಸೂಚಿಸಿದ್ದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಸಿನಿಮಾ ಬಹಿಷ್ಕರಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿದೆ.
JNU ವಿದ್ಯಾರ್ಥಿಗಳಿಗೆ ದೀಪಿಕಾ ಪಡುಕೋಣೆ ಬೆಂಬಲ: ಕನ್ನಿಮೊಳಿ, ಜಾವ್ಡೇಕರ್ ಹೇಳಿದ್ದಿಷ್ಟು.. - ಜೆಎನ್‌ಯು ವಿದ್ಯಾರ್ಥಿಗಳಿಗೆ ದೀಪಿಕಾ ಬೆಂಬಲ
ನವದೆಹಲಿಯ ಜೆಎನ್‌ಯು ಕ್ಯಾಂಪಸ್‌ಗೆ ಭೇಟಿ ನೀಡಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಸಿನಿಮಾಗಳನ್ನು ಬಹಿಷ್ಕರಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಸಲಾಗುತ್ತಿದೆ.
ದೀಪಿಕಾ ಪಡುಕೋಣೆ
ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಮಾತನಾಡಿ, ಭಾರತ ಪ್ರಜಾಪ್ರಭುತ್ವ ರಾಷ್ಟ್ರ. ಯಾವುದೇ ವ್ಯಕ್ತಿ, ಯಾವುದೇ ನಟರು ಎಲ್ಲಿಗೆ ಬೇಕಾದರೂ ಹೋಗಬಹುದು ಮತ್ತು ಅವರ ಅಭಿಪ್ರಾಯ ಅಥವಾ ಬೆಂಬಲ ಸೂಚಿಸುವ ಸ್ವಾತಂತ್ರ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.
ಒಂದು ಕಡೆ ದೀಪಿಕಾ ಸಿನಿಮಾ ಬಹಿಷ್ಕಾರಕ್ಕೆ ಅಭಿಯಾನ ನಡೆಸುತ್ತಿದ್ದರೆ, ಮತ್ತೊಂದೆಡೆ ನಾವು ದೀಪಿಕಾ ಪಡುಕೋಣೆ ಚಿತ್ರಗಳನ್ನು ಬೆಂಬಲಿಸುತ್ತೇವೆ ಎಂದು ಟ್ವಿಟರ್ನಲ್ಲಿ ಮತ್ತಷ್ಟು ಜನ ಸಪೋರ್ಟ್ ಮಾಡ್ತಿದ್ದಾರೆ. ಇದೇ ಶುಕ್ರವಾರ ದೀಪಿಕಾ ಅಭಿನಯದ 'ಚಪಕ್' ಸಿನಿಮಾ ಬಿಡುಗಡೆಯಾಗುತ್ತಿದೆ.