ನವದೆಹಲಿ:ಕಾರ್ಯಗತಗೊಳಿಸಲು ಸಾಧ್ಯವಿಲ್ಲದ ಯಾವುದೇ ವಿಚಾರದ ಕುರಿತಾಗಿ ಸಾರ್ವಜನಿಕವಾಗಿ ಭರವಸೆ ನೀಡಬಾರದು ಎಂದು ಪ್ರಧಾನಿ ಮೋದಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಕಟ್ಟಪ್ಪಣೆ ಮಾಡಿದ್ದಾರೆ.
ಸಂಪುಟದ ಕೆಲ ಸಚಿವರು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅನಾವಶ್ಯಕ ಭರವಸೆಗಳನ್ನು ನೀಡುತ್ತಿರುವ ವಿಚಾರಕ್ಕೆ ಗಮನಕ್ಕೆ ಬಂದಿದ್ದು, ಇದಕ್ಕೆ ಮೋದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
370ನೇ ವಿಧಿ ರದ್ದು ಮಾಡಿದ ನಂತರದಲ್ಲಿ ನೂತನ ಎರಡು ಕೇಂದ್ರಾಡಳಿತ ಪ್ರದೇಶದ ಅಭಿವೃದ್ಧಿಗೆ ಎಲ್ಲ ಸಚಿವರು ಅಭಿವೃದ್ಧಿಪರ ಕಾರ್ಯಗಳಲ್ಲಿ ತೊಡಗಿಸಿಕೊಗಿಸಿಕೊಳ್ಳಬೇಕು ಎಂದು ಇದೇ ವೇಳೆ, ಮೋದಿ ಮನವಿ ಮಾಡಿದ್ದಾರೆ. ನೂತನ ಕೇಂದ್ರಾಡಳಿತ ಪ್ರದೇಶವನ್ನು ಎಲ್ಲರೂ ತಮ್ಮ ಕ್ಷೇತ್ರದ ಅಭಿವೃದ್ಧಿ ಎಂದು ಪರಿಗಣಿಸಿ ಕೆಲಸ ಮಾಡಬೇಕು ಎಂದು ಪ್ರಧಾನಿ ತಮ್ಮ ಸಚಿವರಿಗೆ ಹೇಳಿದ್ದಾರೆ.
ಎಲ್ಲ ಸಚಿವರು ಬೆಳಗ್ಗೆ 9.30ಕ್ಕೆ ಸರಿಯಾಗಿ ತಮ್ಮ ಕಚೇರಿಗಳಲ್ಲಿ ಹಾಜರಿರಬೇಕು ಎಂದು ಸೂಚಿಸಿರುವ ಮೋದಿ ಹಲವರು ಈ ವಿಳಂಬ ಮಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ಮೋದಿ ಹೇಳಿದ್ದಾರೆ. ಆರಂಭದಲ್ಲಿ ಎಲ್ಲ ಸಚಿವರು ಹುಮ್ಮಸ್ಸಿನಲ್ಲಿ ಸಮಯಕ್ಕೆ ಸರಿಯಾಗಿ ಆಫೀಸಿಗೆ ಆಗಮಿಸುತ್ತಿದ್ದರು, ಆದರೆ ನಿಧನಾವಾಗಿ ಈ ಹುಮ್ಮಸ್ಸು ಮರೆಯಾಗಿರುವುದು ಉತ್ತಮ ಲಕ್ಷಣವಲ್ಲ ಎಂದು ಮೋದಿ ಹೇಳಿದ್ದಾರೆ.