ಮಹಾರಾಷ್ಟ್ರ: ಪೌರತ್ವ ಕಾಯ್ದೆಯನ್ನು ವಿರೋಧಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಆರ್ಡಿ ಮೆಡಿಕಲ್ ಕಾಲೇಜಿನಿಂದ ಅಮಾನತುಗೊಂಡಿದ್ದ ಡಾ. ಕಾಫೀಲ್ ಖಾನ್ ಅವರನ್ನು ಮುಂಬೈನ ಸಹರಾ ಪೊಲೀಸ್ ಬಂಧಿಸಿದ್ದಾರೆ.
ಉತ್ತರಪ್ರದೇಶದ ವಿಶೇಷ ಕಾರ್ಯಪಡೆ ಮುಂಬೈಯಲ್ಲಿ ಅವರನ್ನು ಬಂಧಿಸಿದ್ದು ಇದೀಗ ಪೊಲೀಸ್ ಕಸ್ಟಡಿಯಲ್ಲಿ ಇರಿಸಿದ್ದಾರೆ.
ಡಿಸೆಂಬರ್ 12 ರಂದುಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ನಡೆದಿದ್ದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ವೇಳೆ ಡಾ. ಕಫೀಲ್ ಖಾನ್ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಅಲ್ಲದೆ ಗುರುವಾರ ಮುಂಬೈನ ಭಾಗ್ನಲ್ಲಿ ನಡೆಯಲಿದ್ದ ಪ್ರತಿಭಟನೆಯಲ್ಲೂ ಭಾಗವಹಿಸಿಲಿದ್ದರು.
ಕಾಫಿಲ್ ಖಾನ್ ಬಾಬಾ ರಾಘವ್ ದಾಸ್ ಮೆಡಿಕಲ್ ಕಾಲೇಜಿನಲ್ಲಿ ನೊಡಲ್ ಅಧಿಕಾರಿಯಾಗಿದ್ದರು. 2017ರಲ್ಲಿ ಎರಡು ದಿನಗಳ ಅಂತರದಲ್ಲಿ 30 ಮಕ್ಕಳು ಮೃತಪಟ್ಟಿದ್ದರಿಂದ ಅವರನ್ನು ಸೇವೆಯಿಂದ ಅಮಾನತು ಮಾಡಿ ಬಂಧಿಸಲಾಗಿತ್ತು. ಆದರೆ ಕಳೆದ ವರ್ಷ ಉತ್ತರ ಪ್ರದೇಶ ಸರ್ಕಾರ ಅವರಿಗೆ ಕ್ಲೀನ್ ಚಿಟ್ ನೀಡಿತ್ತು.