ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶದ ಗಮನ ಸೆಳೆದಿದ್ದ ಮಂಡ್ಯ ಸಂಸತ್ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಹಾಗೂ ಜೆಡಿಎಸ್ನ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ನಡುವಿನ ಹಣಾಹಣಿ ಮುಗಿದರೂ ದೆಹಲಿ ಕಾಂಗ್ರೆಸ್ ಸಿಎಂಗಳ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪವಾಗಿದೆ.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನವದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಪ್ರಧಾನ ಕಚೇರಿಯಲ್ಲಿ ನೀತಿ ಆಯೋಗದ ಸಭೆಗೆ ಪೂರ್ವಭಾವಿಯಾಗಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಿದರು.
ಡಾ. ಮನಮೋಹನ್ ಸಿಂಗ್ ಅವರೊಂದಿಗೆ ಕಾಂಗ್ರೆಸ್ ಸರ್ಕಾರ ರಾಜ್ಯಗಳ ಸಿಎಂ ಸಭೆ ಈ ವೇಳೆ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ನಾಥ್ ಅವರ ಕರ್ನಾಟಕದ ರಾಜಕಾರಣದ ಬೆಳವಣಿಗೆ ಹೇಗಿದೆ ಎಂದು ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದಾಗ, 'ಚೆನ್ನಾಗಿದೆ. ನಿಧಾನವಾಗಿ ಸಾಗುತ್ತಿದೆ. ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಗೆದ್ದಿದ್ದಾರೆ' ಎಂದರು. ಜೊತೆಗೆ ಯಡಿಯೂರಪ್ಪ ಅವರ ಬಗ್ಗೆಯ ಮಾತನಾಡಿದ್ದಾರೆ.
ಈ ಸಭೆಯಲ್ಲಿ ಪುದುಚೇರಿ ಮುಖ್ಯಮಂತ್ರಿ ನಾರಾಯಣಸ್ವಾಮಿ ಹಾಗೂ ರಾಜಸ್ಥಾನದ ಅಶೋಕ್ ಗೆಹ್ಲೊಟ್ ಉಪಸ್ಥಿತರಿದ್ದರು. ಆದರೆ, ಪಂಜಾಬ್ ಸಿಎಂ,ಕ್ಯಾಪ್ಟನ್ ಅಮರೇಂದರ್ ಸಿಂಗ್ ಅವರು ಗೈರಾಗಿದ್ದರು.