ಮುಂಬೈ:ಹಿಂದಿ ಕಿರುತೆರೆ ನಟಿ ರೂಹಿ ಶೈಲೇಶ್ಕುಮಾರ್ ಸಿಂಗ್ ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಪರಿಣಾಮ ಏಳು ಕಾರುಗಳು ಜಖಂಗೊಂಡಿರುವ ಘಟನೆ ಸಾಂತಾಕ್ರೂಜ್ ಪ್ರದೇಶದಲ್ಲಿ ನಡೆದಿದೆ.
ಕುಡಿದ ಮತ್ತಿನಲ್ಲಿ ನಟಿಯಿಂದ ಅಡ್ಡಾದಿಡ್ಡಿ ಕಾರು ಚಾಲನೆ... ಹಲವು ಗಾಡಿಗಳು ಜಖಂ..! - ಸಾಂತಾಕ್ರೂಜ್
ಸೋಮವಾರ ಬೆಳಗಿನ ಜಾವ ಈ ಘಟನೆ ನಡೆದಿದ್ದು, ದ್ವಿಚಕ್ರ ಹಾಗೂ ನಾಲ್ಕು ಚಕ್ರದ ಹಲವು ವಾಹನಗಳು ಜಖಂಗೊಂಡಿದ್ದು ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ರೂಹಿ ಶೈಲೇಶ್ಕುಮಾರ್ ಸಿಂಗ್
ಸೋಮವಾರ ಬೆಳಗಿನ ಜಾವ ಈ ಘಟನೆ ನಡೆದಿದ್ದು, ದ್ವಿಚಕ್ರ ಹಾಗೂ ನಾಲ್ಕು ಚಕ್ರದ ಹಲವು ವಾಹನಗಳು ಜಖಂಗೊಂಡಿದ್ದು ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಘಟನೆ ನಡೆದ ತಕ್ಷಣ ಜನ ಸೇರಿದ್ದು ಅವರೊಂದಿಗೆ ನಟಿ ವಾಗ್ವಾದ ನಡೆಸುತ್ತಿರುವ ವಿಡಿಯೋ ಟ್ವಿಟರ್ನಲ್ಲಿ ವೈರಲ್ ಆಗಿದೆ. ಘಟನೆಯ ಕುರಿತಂತೆ ಪ್ರಕರಣ ದಾಖಲಾಗಿದ್ದು ಸದ್ಯ ತನಿಖೆ ಪ್ರಗತಿಯಲ್ಲಿದೆ.