ಇಟಾನಗರ್ (ಅರುಣಾಚಲ ಪ್ರದೇಶ): ಇಲ್ಲಿನ ತವಾಂಗ್ ಪ್ರದೇಶದಲ್ಲಿ ಇಂದು ಬೆಳಗ್ಗೆ 7.30 ರ ಸುಮಾರಿಗೆ ಲಘು ಭೂಕಂಪ ಸಂಭವಿಸಿದೆ.
ಅರುಣಾಚಲ ಪ್ರದೇಶದಲ್ಲಿ 3.4 ತೀವ್ರತೆಯ ಲಘು ಭೂಕಂಪ - ಅರುಣಾಚಲ ಪ್ರದೇಶದ ತವಾಂಗ್
ಅರುಣಾಚಲ ಪ್ರದೇಶದ ತವಾಂಗ್ನಲ್ಲಿ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ 3.4 ರಷ್ಟು ತೀವ್ರತೆ ದಾಖಲಾಗಿದೆ.
ಲಘು ಭೂಕಂಪ
ರಿಕ್ಟರ್ ಮಾಪನದಲ್ಲಿ 3.4 ರಷ್ಟು ತೀವ್ರತೆ ದಾಖಲಾಗಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ. ಘಟನೆಯಲ್ಲಿ ಯಾವುದೇ ಸಾವು-ನೋವು ವರದಿಯಾಗಿಲ್ಲ.
ಈ ತಿಂಗಳಲ್ಲಿ ದೇಶದಲ್ಲಿ ನಡೆದ ಮೂರನೇ ಭೂಕಂಪ ಇದಾಗಿದೆ. ಸೆ.1 ರಂದು ಮಣಿಪುರದಲ್ಲಿ 5.1 ತೀವ್ರತೆಯ ಹಾಗೂ ಸೆ.5 ರಂದು ಮಹಾರಾಷ್ಟ್ರದ ಪಾಲ್ಘರ್ನಲ್ಲಿ 2.7 ತೀವ್ರತೆಯ ಭೂಕಂಪ ಸಂಭವಿಸಿತ್ತು.