ಹರಿದ್ವಾರ :ಉತ್ತರಾಖಂಡದ ಹರಿದ್ವಾರದಲ್ಲಿ ಭೂಕಂಪ ಸಂಭವಿಸಿರುವುದಾಗಿ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ಮಾಹಿತಿ ನೀಡಿದೆ.
ಇಂದು ಬೆಳಗ್ಗೆ 9.41ಕ್ಕೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 3.9ರಷ್ಟು ತೀವ್ರತೆ ದಾಖಲಾಗಿದೆ. ಹರಿದ್ವಾರದಿಂದ ಸುಮಾರು 22 ಕಿಲೋ ಮೀಟರ್ ದೂರದಲ್ಲಿ ಹಾಗೂ 10 ಕಿಲೋ ಮೀಟರ್ ಆಳದಲ್ಲಿ ಭೂಕಂಪದ ಕೇಂದ್ರ ಬಿಂದುವಿದೆ.