ದೆಹಲಿಯಲ್ಲಿ ಭೂಕಂಪನ: ಎಲ್ಲರ ಸುರಕ್ಷತೆಗೋಸ್ಕರ ಪ್ರಾರ್ಥಿಸುವೆ- ಕೇಜ್ರಿವಾಲ್ - ರಿಕ್ಟರ್ ಮಾಪಕದಲ್ಲಿ 3.5ರಷ್ಟು ತೀವ್ರತೆ ದಾಖಲು
18:07 April 12
ರಿಕ್ಟರ್ ಮಾಪಕದಲ್ಲಿ 3.5ರಷ್ಟು ತೀವ್ರತೆ ದಾಖಲು
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 3.5ರಷ್ಟು ತೀವ್ರತೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ದೇಹಲಿ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಲಘುವಾಗಿ ಭೂಮಿ ಕಂಪಿಸಿದೆ ಎಂದು ತಿಳಿದು ಬಂದಿದೆ.
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ, ದೆಹಲಿಯಲ್ಲಿ ಭೂಕಂಪನವಾದೆ. ಎಲ್ಲರೂ ಸೇಪ್ ಆಗಿದ್ದೀರಿ ಎಂದು ಭಾವಿಸಿದ್ದೇನೆ. ಎಲ್ಲರ ಸುರಕ್ಷತೆಗಾಗಿ ನಾನು ಪ್ರಾರ್ಥನೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ದೆಹಲಿಯ ಸುತ್ತಮುತ್ತಲ ನೋಯ್ಡಾ, ಗಾಜಿಯಾಬಾದ್‍ನಲ್ಲಿ ಭೂಕಂಪನ ಉಂಟಾಗಿರುವ ಬಗ್ಗೆ ತಿಳಿದು ಬಂದಿದೆ. ಲಾಕ್‍ಡೌನ್‍ನಿಂದ ಮನೆಯಲ್ಲೇ ಇರುವ ದೆಹಲಿಯ ಜನರು ಸಾಮಾಜಿಕ ಜಾಲತಾಣದಲ್ಲಿ ಭೂಕಂಪದ ಅನುಭವ ಹಂಚಿಕೊಂಡಿದ್ದಾರೆ. ಸಂಜೆ 5.45ಕ್ಕೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಇಲಾಖೆ ತಿಳಿಸಿದೆ.