ಭೋಪಾಲ್ :ಸತತವಾಗಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪದಲ್ಲಿ ಮಧ್ಯಪ್ರದೇಶ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ನಾಯಕ ಕಮಲ್‌ನಾಥ್ ವಿರುದ್ಧ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಅವರ ಹೆಸರನ್ನು ತೆಗೆದು ಹಾಕಿದೆ.
ಈ ತಿಂಗಳ ಆರಂಭದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಬಿಜೆಪಿ ನಾಯಕಿ ಇಮಾರ್ಥಿ ದೇವಿಯನ್ನು ಕಮಲ್‌ನಾಥ್ 'ಐಟಂ' ಎಂದು ಸಂಬೋಧಿಸಿದ್ದರು. ಈ ವಿಚಾರ ರಾಜಕೀಯ ವಲಯದಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.