ನವದೆಹಲಿ: ಭಾರತದ ಆರ್ಥಿಕತೆ ಭಾರಿ ಕುಸಿತದ ಹಾದಿ ಹಿಡಿದಿದ್ದು, ಈ ವಿಚಾರದ ಬಗ್ಗೆ ಮಾಜಿ ಪ್ರಧಾನಿ ಹಾಗೂ ಅರ್ಥಶಾಸ್ತ್ರಜ್ಞರೂ ಆಗಿರುವ ಮನಮೋಹನ್ ಸಿಂಗ್ ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
ಮೋದಿ ನೇತೃತ್ವದ ಎನ್ಡಿಎ ಸರ್ಕಾರವು ಆರ್ಥಿಕತೆ ವಿಚಾರದಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮನಮೋಹನ್ ಸಿಂಗ್ ಹೇಳಿದ್ದಾರೆ. ಮಂದಗತಿ ಆರ್ಥಿಕತೆಯ ಮಧ್ಯಭಾಗದಲ್ಲಿ ನಾವಿದ್ದೇವೆ ಎಂದು ಮಾಜಿ ಪ್ರಧಾನಿ ಸುದ್ದಿಸಂಸ್ಥೆಯೊಂದರ ಜೊತೆ ಮಾತನಾಡುವ ವೇಳೆ ಹೇಳಿದ್ದಾರೆ.