ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್‌ನಲ್ಲಿನ ಹಣಕಾಸಿನ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಹಾಗೂ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಮತ್ತು ಇತರರ 11.86 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಜಪ್ತಿಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಹಣ ವರ್ಗಾವಣೆ ತಡೆ ಕಾಯ್ದೆಯಡಿ ಇಡಿ ತಾತ್ಕಾಲಿಕ ಆದೇಶ ಹೊರಡಿಸಿದ್ದು, ಜಪ್ತಿ ಮಾಡಲಾದ ಆಸ್ತಿಗಳು ಜಮ್ಮು ಮತ್ತು ಶ್ರೀನಗರದಲ್ಲಿದೆ ಎಂದು ತಿಳಿದು ಬಂದಿದೆ.