ನವದೆಹಲಿ:ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ (ಎಂಎಸ್ಸಿಬಿ) ಹಗರಣ ಪ್ರಕರಣದಲ್ಲಿ ಅಕ್ರಮ ಹಣ ವಹಿವಾಟು ಆರೋಪದ ಮೇಲೆ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹಾಗೂ ಅವರ ಸೋದರಳಿಯ, ಮಾಜಿ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ವಿರುದ್ಧ ಜಾರಿ ನಿರ್ದೇಶನಾಲಯವು ಪ್ರಕರಣ ದಾಖಲಿಸಿಕೊಂಡಿದೆ.
ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ಗೆ ಸಂಬಂಧಿಸಿದ 25,000 ಕೋಟಿ ರೂ.ಗಳ ಹಗರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ಸಹಕಾರಿ ಬ್ಯಾಂಕ್ನ 70 ಮಾಜಿ ಕಾರ್ಯಕಾರಿಗಳ ಮೇಲೆಯೂ ಕೂಡ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
21ನೇ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೂ ಮುನ್ನ ಶರದ್ ಪವಾರ್ ವಿರುದ್ಧ ಈ ಪ್ರಕರಣ ದಾಖಲಾಗಿದೆ. ಹಾಗೆಯೇ ಇಡಿಯಿಂದ ಇನ್ನು ಕೆಲವೇ ದಿನಗಳಲ್ಲಿ ಪ್ರಕರಣ ಸಂಬಂಧ ಹೇಳಿಕೆ ಪಡೆಯಲು ಸಮನ್ಸ್ ಜಾರಿಯಾಗುವ ಸಾಧ್ಯತೆ ಇದೆ.