ಮುಂಬೈ:ಮಂಗಳವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶಿವಸೇನೆ ಮುಖಂಡ ಪ್ರತಾಪ್ ಸರ್ನಾಯಕ್ ಅವರ ವಸತಿ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ.
ಮನಿ ಲಾಂಡರಿಂಗ್ ಪ್ರಕರಣದಲ್ಲಿ ಶಿವಸೇನೆ ಶಾಸಕ ಪ್ರತಾಪ್ ಸರ್ನಾಯಕ್ ಅವರಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ತನಿಖಾ ಸಂಸ್ಥೆಯ ತಂಡಗಳು ಶೋಧ ನಡೆಸಲು ಪ್ರಾರಂಭಿಸಿವೆ. ಈ ದಾಳಿಯು ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದ್ದೇ ಎಂಬುದು ಇಡಿ ಇನ್ನೂ ದೃಢಪಡಿಸಿಲ್ಲ.