ಗಾಝಿಯಾಬಾದ್ : ವೃದ್ಧೆಯ ಮೇಲೆ ನೆರೆಹೊರೆಯ ವ್ಯಕ್ತಿಯೊಬ್ಬ ಹಲ್ಲೆ ನಡೆಸಿರುವ ಘಟನೆ ನಗರದ ಕವಿ ನಗರ ಪ್ರದೇಶದಲ್ಲಿ ಸೆ. 12 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮಗಳನ್ನ ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ವೃದ್ಧೆ ಮೇಲೆ ಹಲ್ಲೆ - ಉತ್ತರ ಪ್ರದೇಶದ ಗಾಝಿಯಾಬಾದ್ನಲ್ಲಿ ವೃದ್ಧೆ ಮೇಲೆ ಹಲ್ಲೆ
ನೆರೆ ಮನೆಯ ವ್ಯಕ್ತಿಯೊಬ್ಬ ವೃದ್ಧೆಯ ಮೇಲೆ ಹಲ್ಲೆ ನಡೆಸಿದ ಘಟನೆ ಗಾಝಿಯಾಬಾದ್ನಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಗಾಝಿಯಾಬಾದ್ನಲ್ಲಿ ವೃದ್ಧೆಯ ಮೇಲೆ ಹಲ್ಲೆ
ತನ್ನ ಮಗಳನ್ನು ಚುಡಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ಮಹಿಳೆ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಆರೋಪಿಯನ್ನು ಸುನಿಲ್ ಚೌಧರಿ ಎಂದು ಗುರುತಿಸಲಾಗಿದೆ. ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಆರೋಪಿಯನ್ನು ಬಂಧಿಸಿದ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಹಲ್ಲೆಗೊಳಗಾದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ತನಿಖೆ ಮುಂದುವರೆಸಲಾಗಿದೆ ಎಂದು ಗಾಝಿಯಾಬಾದ್ ಎಸ್ಪಿ ಅಭಿಷೇಕ್ ವರ್ಮಾ ತಿಳಿಸಿದ್ದಾರೆ.