ನವದೆಹಲಿ:ವಿಮಾನ ನಿಲ್ದಾಣಗಳಲ್ಲಿ ಹಿಂದಿ ಹೇರಿಕೆ ಕುರಿತು ವಿರೋಧ ವ್ಯಕ್ತಪಡಿಸಿದ ಡಿಎಂಕೆ ಮುಖಂಡೆ ಕನಿಮೋಳಿ ಹೇಳಿಕೆಯನ್ನ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಇದೊಂದು ಚುನಾವಣಾ ಗಿಮಿಕ್ ಎಂದು ಕರೆದಿದ್ದಾರೆ.
ಹಿಂದಿ ಹೇರಿಕೆ ಕುರಿತು ಕನಿಮೋಳಿ ಗರಂ: ಚುನಾವಣಾ ಗಿಮಿಕ್ ಎಂದ ಬಿ.ಎಲ್ ಸಂತೋಷ್ - ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್
ಹಿಂದಿ ಹೇರಿಕೆಯ ಕುರಿತು ವಿರೋಧ ವ್ಯಕ್ತಪಡಿಸಿದ ಡಿಎಂಕೆ ನಾಯಕಿ ಕನಿಮೋಳಿ ಹೇಳಿಕೆಯ ಕುರಿತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಇದು ಚುನಾವಣಾ ಗಿಮಿಕ್ ಎಂದಿದ್ದಾರೆ.

kazhimoli
ಕೆಲ ತಿಂಗಳುಗಳಲ್ಲೇ ಚುನಾವಣೆ ಇರುವುದರಿಂದ ಡಿಎಂಕೆ ನಾಯಕಿ ಇಂತಹ ಹೇಳಿಕೆ ನೀಡಿದ್ದಾರೆ ಎಂದು ಸಂತೋಷ್ ವಿಶ್ಲೇಷಿಸಿದ್ದಾರೆ. ಮುಂದಿನ ವರ್ಷದ ಮೊದಲಾರ್ಧದಲ್ಲಿ ತಮಿಳುನಾಡಿನಲ್ಲಿ ಚುನಾವಣೆ ನಡೆಯಲಿದೆ.
"ಮುಂದಿನ ವರ್ಷದ ಆರಂಭದಲ್ಲಿ ತಮಿಳುನಾಡು ವಿಧಾನಸಭೆ ಸಾರ್ವಜನಿಕ ಚುನಾವಣೆ ಇರುವ ಹಿನ್ನೆಲೆಯಲ್ಲಿ ಡಿಎಂಕೆ ಈಗಿನಿಂದಲೇ ಅಭಿಯಾನ ಪ್ರಾರಂಭಿಸಿದೆ" ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಟ್ವೀಟ್ ಮಾಡಿದ್ದಾರೆ.