ನವದೆಹಲಿ:ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ರಾಜ್ಯದ ನಿವಾಸಿಗಳಿಗೆ ಬಂಪರ್ ಗಿಫ್ಟ್ ನೀಡಿದ್ದು, 200 ಯುನಿಟ್ವರೆಗಿನ ವಿದ್ಯುತ್ ಬಳಕೆಯನ್ನು ಉಚಿತ ಎಂದು ಘೋಷಣೆ ಮಾಡಿದ್ದಾರೆ.
201ರಿಂದ 400 ಯುನಿಟ್ ವಿದ್ಯುತ್ ಬಳಸುವ ಬಳಕೆದಾರರು ಅರ್ಧದಷ್ಟು ಬಿಲ್ ಪಾವತಿಸಬೇಕು ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಶ್ರೀಮಂತರು ಹಾಗೂ ರಾಜಕಾರಣಿಗಳು ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ ಎನ್ನುವ ಆರೋಪ ಇದೆ. ಆದರೆ, ಈ ನೂತನ ನಿಯಮ ಇದಕ್ಕೆ ಅಪವಾದ ಎಂದು ಕೇಜ್ರಿವಾಲ್ ಹೇಳಿಕೊಂಡಿದ್ದಾರೆ.
ಕೇಜ್ರಿವಾಲ್ ನಿರ್ಧಾರವನ್ನು ಸ್ವಾಗತಿಸಿರುವ ದೆಹಲಿ ಡಿಸಿಎಂ ಮನೀಷ್ ಸಿಸೋಡಿಯಾ, ದೆಹಲಿ ಇತಿಹಾಸದಲ್ಲೇ ಐತಿಹಾಸಿಕ ದಿನ ಎಂದು ಬಣ್ಣಿಸಿದ್ದಾರೆ.
2020ರ ಫೆಬ್ರವರಿಯಲ್ಲಿ ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಇದೇ ನಿಟ್ಟಿನಲ್ಲಿ ಮತದಾರರನ್ನು ಸೆಳೆಯಲು ಕೇಜ್ರಿವಾಲ್ ಬಂಪರ್ ಆಫರ್ ನೀಡಿದ್ದಾರೆ.