ಶ್ರೀನಗರ (ಜಮ್ಮು ಕಾಶ್ಮೀರ) : ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರಿಗಾಗಿ ಶೋಧ ಕಾರ್ಯ ಆರಂಭವಾಗಿದೆ. ಈ ವೇಳೆ ಕಣಿವೆ ನಾಡಿನ ಹಲವೆಡೆ ಉಗ್ರರು ಹಾಗೂ ಸೇನಾಪಡೆಯ ನಡುವೆ ಗುಂಡಿನ ಕಾಳಗ ನಡೆಯುತ್ತಿದೆ.
ಶೋಪಿಯಾನ್ನಲ್ಲಿ ಉಗ್ರರಿಗಾಗಿ ಸೇನೆಯಿಂದ ಶೋಧ, ಗುಂಡಿನ ಸುರಿಮಳೆ - Shopian encouter
ಜಮ್ಮು ಕಾಶ್ಮೀರದಲ್ಲಿ ಉಗ್ರರ ಉಪಟಳವನ್ನು ನಿಯಂತ್ರಿಸಲು ಸೇನೆಯಿಂದ ಶೋಧ ಕಾರ್ಯ ನಡೆಯುತ್ತಿದ್ದು, ರೆಬನ್ ಹಾಗೂ ಇತರ ಪ್ರದೇಶಗಳಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ.
ಶೋಪಿಯಾನ್ ಎನ್ಕೌಂಟರ್
ಶೋಪಿಯಾನ್ ಜಿಲ್ಲೆಯ ರೆಬನ್ ಪ್ರದೇಶದಲ್ಲಿ ಪೊಲೀಸರು ಹಾಗೂ ಸೇನಾಪಡೆ ಉಗ್ರರ ಶೋಧಕ್ಕಾಗಿ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದು ಎರಡೂ ಕಡೆಗಳಿಂದ ಗುಂಡಿನ ದಾಳಿ, ಪ್ರತಿದಾಳಿ ನಡೆಯುತ್ತಿದೆ.
ಸಿಆರ್ಪಿಎಫ್ನ 178ನೇ ಬೆಟಾಲಿಯನ್, ರಾಷ್ಟ್ರೀಯ ರೈಫಲ್ಸ್ (ಆರ್.ಆರ್), ಸ್ಪೆಷಲ್ ಆಪರೇಷನ್ ಗ್ರೂಪ್ (ಎಸ್ಒಜಿ) ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.