ಬಾರಾಮುಲ್ಲಾ: ಜಮ್ಮು ಕಾಶ್ಮೀರದ ಸಪೋರಾದ ರೆಬಾನ್ ಪ್ರದೇಶ ಮತ್ತು ಬಾರಮುಲ್ಲಾದಲ್ಲಿ ಮುಂಜಾನೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಕದನ ನಡೆದಿದೆ.
ಜಮ್ಮುಕಾಶ್ಮೀರದಲ್ಲಿ ಭದ್ರತಾ ಪಡೆ, ಭಯೋತ್ಪಾದಕರ ನಡುವೆ ಗುಂಡಿನ ಕಾಳಗ - ಕಾಶ್ಮೀರ ವಲಯ ಪೊಲೀಸರು
ಜಮ್ಮು ಕಾಶ್ಮೀರದ ಸಪೋರ್ ಮತ್ತು ಬಾರಮುಲ್ಲಾದಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಜಮ್ಮು-ಕಾಶ್ಮೀರದ ಸೊಪೋರ್‌ನಲ್ಲಿ ಭದ್ರತಾ ಪಡೆ, ಭಯೋತ್ಪಾದಕರ ನಡುವೆ ಎನ್‌ಕೌಂಟರ್
ಪೊಲೀಸರು ಮತ್ತು ಭದ್ರತಾ ಪಡೆಗಳು ಸ್ಥಳದಲ್ಲಿದ್ದು, ಹೆಚ್ಚಿನ ವಿವರಗಳನ್ನು ನೀಡಲಾಗುವುದು ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಜುಲೈ 11 ರಂದು ಇಲ್ಲಿನ ನೌಗಮ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ಸೇನೆಯು ಉಗ್ರರ ಒಳನುಸುಳುವ ಪ್ರಯತ್ನವನ್ನು ವಿಫಲಗೊಳಿಸಿದ್ದರು. ಈ ವೇಳೆ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದರು.