ಕರ್ನಾಟಕ

karnataka

ETV Bharat / bharat

ಪುಲ್ವಾಮಾದಲ್ಲಿ ಮತ್ತೆ ಗುಂಡಿನ ದಾಳಿ: ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಮುಖಾಮುಖಿ..! - Encounter in Kashmir

ಪುಲ್ವಾಮಾದಲ್ಲಿ ಮತ್ತೆ ಗುಂಡಿನ ದಾಳಿ ನಡೆದಿದ್ದು, ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಮುಖಾಮುಖಿ ಸಂಭವಿಸಿದೆ.

Pulwama encounter
ಪುಲ್ವಾಮಾದಲ್ಲಿ ಮತ್ತೆ ಗುಂಡಿನ ದಾಳಿ

By

Published : Nov 19, 2020, 3:20 PM IST

ಪುಲ್ವಾಮಾ (ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಮತ್ತೆ ಗುಂಡಿನ ದಾಳಿ ನಡೆದಿದ್ದು, ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಮುಖಾಮುಖಿ ಸಂಭವಿಸಿದೆ.

ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ ನಂತರದಲ್ಲಿ, ಉಗ್ರ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು ಈ ವೇಳೆ ಗುಂಡಿನ ದಾಳಿ ನಡೆದಿದೆ.

ಪುಲ್ವಾಮಾದ ಪರಿಗಂ ಗ್ರಾಮದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಅಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಸಿಕ್ಕಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಇನ್ನು ಪುಲ್ವಾಮಾದಲ್ಲಿ ಭಯೋತ್ಪಾದಕರು ನಡೆಸಿದ ಗ್ರೆನೇಡ್ ದಾಳಿಯಲ್ಲಿ, ಕನಿಷ್ಠ 12 ಜನರು ಗಾಯಗೊಂಡಿದ್ದರು.

ABOUT THE AUTHOR

...view details