ಗಂದೇರ್ಬಲ್(ಜಮ್ಮು ಮತ್ತು ಕಾಶ್ಮೀರ):ಉಗ್ರರು ಮತ್ತು ಭದ್ರತಾ ಪಡೆ ನಡುವಿನ ಗುಂಡಿನ ಕಾಳಗದಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.
ಗಡಿಯಲ್ಲಿ ಗುಂಡಿನ ಕಾಳಗ: ಓರ್ವ ಉಗ್ರನನ್ನು ಸದೆಬಡಿದ ಸೇನೆ - Encounter in Ganderbal news
ಗಡಿಯಲ್ಲಿ ಮತ್ತೆ ಉಗ್ರರು ಬಾಲ ಬಿಚ್ಚಿದ್ದಾರೆ. ಇದಕ್ಕೆ ಭಾರತೀಯ ಭದ್ರತಾ ಪಡೆ ತಕ್ಕ ಪ್ರತ್ಯುತ್ತರ ನೀಡುತ್ತಿದ್ದು ಓರ್ವ ಉಗ್ರನನ್ನು ಹತ್ಯೆಗೈದಿದ್ದಾರೆ.
ಉಗ್ರರು ಭದ್ರತಾ ಪಡೆ ನಡುವೆ ಮುಂದುವೆರಿದ ಗುಂಡಿನ ಕಾಳಗ
ಜಮ್ಮು ಮತ್ತು ಕಾಶ್ಮೀರದ ಗಂದೇರ್ಬಲ್‌ನ ಗುಂದ್ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಯ ನಡುವೆ ಇಂದು ಮುಂಜಾನೆಯಿಂದ ಗುಂಡಿನ ಚಕಮಕಿ ನಡೆಯುತ್ತಿದ್ದು, ಈ ವೇಳೆ ಓರ್ವ ಯೋಧನಿಗೆ ಗಾಯವಾಗಿದೆ.
ವಿಶ್ವಸಂಸ್ಥೆ ಘೋಷಿಸಿದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಸೋಮವಾರ ಬಂಡಿಪೋರಾದಲ್ಲಿ ಭದ್ರತಾ ಪಡೆಗಳು ಹತ್ಯೆ ಮಾಡಿದ್ದವು.