ಶ್ರೀನಗರ (ಕಾಶ್ಮೀರ):ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಗೂಸು ಪ್ರದೇಶದಲ್ಲಿ ಎನ್ಕೌಂಟರ್ ಆರಂಭವಾಗಿದ್ದು, ಉಗ್ರರ ಗುಂಡಿನ ದಾಳಿಗೆ ಯೋಧ ಹುತಾತ್ಮರಾಗಿದ್ದಾರೆ. ಸದ್ಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದ್ದು ಓರ್ವ ಉಗ್ರನನ್ನು ಹೊಡೆದುರುಳಿಸಿದೆ.
ಕಾಶ್ಮೀರದಲ್ಲಿ ಯೋಧ ಹುತಾತ್ಮ: ಸೇನಾ ಪ್ರತ್ಯುತ್ತರಕ್ಕೆ ಉಗ್ರ ಬಲಿ
ಕಾಶ್ಮೀರದಲ್ಲಿ ನಡೆಯುತ್ತಿರುವ ಸೇನಾ ಕಾರ್ಯಾಚರಣೆ ವೇಳೆ ಉಗ್ರರ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಸೇನೆ ತಕ್ಕ ಪ್ರತ್ಯುತ್ತರ ನೀಡಿದ್ದು, ಓರ್ವ ಉಗ್ರನನ್ನು ಹೊಡೆದುರುಳಿಸಿದೆ.
ಕಾಶ್ಮೀರದಲ್ಲಿ ಉಗ್ರರ ದಮನಕ್ಕೆ ಮತ್ತೆ ಎನ್ಕೌಂಟರ್
ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸುತ್ತಿವೆ. ಉಗ್ರರು ಇರುವ ಖಚಿತ ಸುಳಿವಿನ ಮೇಲೆ ಭದ್ರತಾಪಡೆಗಳು ಈಗಾಗಲೇ ಕಾರ್ಯಾಚರಣೆ ಕೈಗೊಂಡಿವೆ ಎಂದು ಕಾಶ್ಮೀರ ವಲಯದ ಪೊಲೀಸರು ತಿಳಿಸಿದ್ದಾರೆ.
ಇದಕ್ಕೂ ಮೊದಲು ಜುಲೈ 4ರಂದು ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಅಪರಿಚಿತ ಉಗ್ರರನ್ನು ಕೊಂದು ಹಾಕಲಾಗಿತ್ತು. ಕುಲ್ಗಾಂನ ಅರ್ರಾ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಬಂದ ನಂತರ ಎನ್ಕೌಂಟರ್ ಪ್ರಾರಂಭವಾಗಿತ್ತು.
Last Updated : Jul 7, 2020, 10:27 AM IST