ಜೈಪುರ (ರಾಜಸ್ಥಾನ): ರಾಜಸ್ಥಾನದಲ್ಲಿ ರಾಜಕೀಯ ವ್ಯವಸ್ಥೆ ಸ್ವಲ್ಪ ಮಟ್ಟಿಗೆ ಸುಧಾರಿಸಿದಂತೆ ಕಾಣುತ್ತಿದೆ. ಸುಮಾರು ಒಂದು ತಿಂಗಳ ನಂತರ ಉಪಮುಖ್ಯಮಂತ್ರಿ ಹಾಗೂ ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರಾದ ಸಚಿನ್ ಪೈಲಟ್ ಜೈಪುರದ ತಮ್ಮ ಸರ್ಕಾರಿ ನಿವಾಸವನ್ನು ತಲುಪಿದ್ದಾರೆ.
ಇತ್ತೀಚಿನ ರಾಜಕೀಯ ಪರಿಸ್ಥಿತಿಯ ಬಗ್ಗೆ ಈಟಿವಿ ಭಾರತ ಸಚಿನ್ ಪೈಲಟ್ ಅವರೊಂದಿಗೆ ವಿಶೇಷ ಸಂದರ್ಶನ ನಡೆಸಿದ್ದು, ಕೆಲವು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇದರ ಜೊತೆಗೆ ನನ್ನ ಜೊತೆಯಲ್ಲಿರುವ ಶಾಸಕರು ಪಕ್ಷದ ವಿರುದ್ಧವಾಗಿ ಒಂದೇ ಒಂದು ಮಾತನ್ನೂ ಆಡಿರಲಿಲ್ಲ. ಆದರೂ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಚಿನ್ ಪೈಲಟ್, ಪ್ರದೇಶ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸಿಎಂ ಅಶೋಕ್ ಗೆಹ್ಲೋಟ್ ನನ್ನ ರಾಜಕೀಯ ಮುಗಿದಿದೆ ಎಂದು ಹೇಳುತ್ತಿದ್ದಾರೆ. ಇದರ ಜೊತೆಗೆ ಕೆಲವೊಂದು ಆರೋಪಗಳನ್ನು ಮಾಡುತ್ತಿದ್ದಾರೆ. ಆದರೆ, ಇದನ್ನು ಜನ ನೋಡುತ್ತಿದ್ದಾರೆ. ಸರಿ ಹಾಗೂ ತಪ್ಪುಗಳನ್ನು ಅವರೇ ನಿರ್ಧಾರ ಮಾಡುತ್ತಾರೆ ಎಂದು ಸಚಿನ್ ಪೈಲಟ್ ಸ್ಪಷ್ಟನೆ ನೀಡಿದ್ದಾರೆ.
ನಾನು ವ್ಯಕ್ತಿಗತವಾಗಿ ರಾಜಕೀಯ ಮಾಡುವುದಿಲ್ಲ. ರಾಜ್ಯಕ್ಕಾಗಿ ಕೊನೆಯ ಉಸಿರು ಇರುವವರೆಗೆ ದುಡಿಯಬೇಕು ಎಂಬ ಇಚ್ಛೆಯಿದೆ. ಪಕ್ಷವನ್ನು ಬೆಳೆಸಬೇಕಿದೆ. ಯಾವುದೇ ಪದವಿ, ಅಧಿಕಾರದ ಆಸೆ ನನಗೆ ಇಲ್ಲ. ಸಿಎಂ ಅಶೋಕ್ ಗೆಹ್ಲೋಟ್ ಅವರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಚಿನ್ ಪೈಲಟ್ ಹೇಳಿದ್ದಾರೆ.
ಈಗ ಸದ್ಯಕ್ಕೆ ಕಾಂಗ್ರೆಸ್ ಹೈಕಮಾಂಡ್ ಮೂರು ಸದಸ್ಯರ ಸಮಿತಿಯನ್ನು ರಚನೆ ಮಾಡಿದ್ದು, ರಾಜಸ್ಥಾನ ರಾಜಕೀಯ ಅತಂತ್ರತೆಯನ್ನು ಸ್ವಲ್ಪ ಮಟ್ಟಿಗೆ ಕೊನೆಗಾಣಿಸುವ ಅಥವಾ ಪೂರ್ಣವಾಗಿ ನಿವಾರಣೆ ಸಾಧ್ಯತೆ ಇದೆ ಎನ್ನಲಾಗಿದೆ.