ಶ್ರೀನಗರ:ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡುವ ನಿರ್ಧಾರದ ಬೆನ್ನಲ್ಲೆ, ವಿಧ್ವಂಸಕ ಕೃತ್ಯಗಳ ಆತಂಕದಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಆದರೆ ರಾಜ್ಯದಲ್ಲಿ ಎಲ್ಲವೂ ಸಹಜವಾಗಿವೆ ಎಂದು ರಾಜ್ಯಪಾಲರು ಹೇಳಿಕೆ ನೀಡಿದ್ದಾರೆ.
ಕಾಶ್ಮೀರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ ಎಂಬ ಮಾತುಗಳನ್ನು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅಲ್ಲಗಳೆದಿದ್ದಾರೆ. ಅಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸರ್ಕಾರಿ ಆದೇಶಗಳು ಅಸಿಂಧುವಾದವು ಎಂದು ಟೀಕಿಸಿದ್ದಾರೆ.