ಕರ್ನಾಟಕ

karnataka

ETV Bharat / bharat

ಸಾರ್ವಜನಿಕ ಸುರಕ್ಷತೆ ನೆಪದಲ್ಲಿ ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರುಕ್​ ಅಬ್ದುಲ್ಲಾ ಬಂಧನ - ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ

ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಕಠಿಣ ಸಾರ್ವಜನಿಕ ಸುರಕ್ಷತಾ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ.

ಫಾರೂಕ್ ಅಬ್ದುಲ್ಲಾ

By

Published : Sep 16, 2019, 7:11 PM IST

ಶ್ರೀನಗರ:ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಕಠಿಣ ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್ಎ) ಅಡಿಯಲ್ಲಿ ಬಂಧಿಸಲಾಗಿದೆ.

ಪಿಎಸ್‌ಎ ಅಡಿಯಲ್ಲಿ ಅಬ್ದುಲ್ಲಾ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಕಾಯ್ದೆ ಯಾವುದೇ ವ್ಯಕ್ತಿಯನ್ನು ಎರಡು ವರ್ಷಗಳ ಕಾಲ ವಿಚಾರಣೆಯಿಲ್ಲದೆ ಬಂಧಿಸಲು ಅಧಿಕಾರಿಗಳಿಗೆ ಅನುವು ಮಾಡಿಕೊಡುತ್ತದೆ. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ವಿಧಿಯನ್ನ ರದ್ದುಗೊಳಿಸದ ನಂತರ ಫಾರುಕ್ ಅಬ್ದುಲ್ಲಾ ಅವರನ್ನ ಕೇಂದ್ರ ಸರ್ಕಾರ ಗೃಹಬಂಧನದಲ್ಲಿ ಇರಿಸಿತ್ತು.

ತಮಿಳುನಾಡಿನ ಎಂಡಿಎಂಕೆ ಪಕ್ಷದ ನಾಯಕ ವೈಕೋ ಫಾರುಕ್ ಅಬ್ದುಲ್ಲಾ ಅವರ ಬಿಡುಗಡೆ ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್​, ಫಾರುಕ್ ಅವರನ್ನ ನಾಯಾಲಯಕ್ಕೆ ಹಾಜರು ಪಡಿಸುವಂತೆ ಸಲ್ಲಿಸಿರುವ ಮನವಿಗೆ ಸ್ಪಂದಿಸುವಂತೆ ಕೇಂದ್ರ ಮತ್ತು ಜಮ್ಮು ಮತ್ತು ಕಾಶ್ಮೀರ ಆಡಳಿತವನ್ನು ಕೇಳಿತ್ತು.

ಆದರೆ ಈಗ ಮಾಜಿ ಮುಖ್ಯಮಂತ್ರಿ ಫಾರುಕ್​ ಅಬ್ದುಲ್ಲಾ ಅವರನ್ನ ಸಾರ್ವಜನಿಕ ಸುರಕ್ಷತಾ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ.

ABOUT THE AUTHOR

...view details