ನವದೆಹಲಿ:ದೆಹಲಿಯಲ್ಲಿ ನಡೆದ ಸಿಎಎ ವಿರೋಧಿ ಗಲಭೆ ಪ್ರಕರಣದಲ್ಲಿ ಜೆಎನ್ಯುನ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ನನ್ನು ಬಂಧಿಸಲಾಗಿದೆ. ಕಾನೂನು ಬಾಹಿರ ಚಟುವಟಿಕೆ (ತಡೆ) ಕಾಯ್ದೆಯಡಿ ಖಾಲಿದ್ನನ್ನು ಅರೆಸ್ಟ್ ಮಾಡಲಾಗಿದೆ.
ಸುಮಾರು 11 ಗಂಟೆ ವಿಚಾರಣೆಗೊಳಪಡಿಸಿದ ಬಳಿಕ ಖಾಲಿದ್ನನ್ನು ದೆಹಲಿ ಪೊಲೀಸರ ವಿಶೇಷ ತಂಡ ಅರೆಸ್ಟ್ ಮಾಡಿದೆ. ಈತನನ್ನು ಇಂದು ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗುವುದು.
ಈಶಾನ್ಯ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಅಪರಾಧ ನಿಗ್ರಹ ದಳದ ಪೊಲೀಸರು ಖಾಲಿದ್ನನ್ನು ಸೆಪ್ಟೆಂಬರ್ 2ರಂದೇ ಒಂದೆರಡು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು. ಇದಕ್ಕೂ ಮುನ್ನ ದೆಹಲಿ ಪೊಲೀಸರ ವಿಶೇಷ ತಂಡ ಕೂಡ ಈತನನ್ನು ವಿಚಾರಣೆಗೆ ಒಳಪಡಿಸಿತ್ತು. ದೆಹಲಿ ಗಲಭೆಗೆ ಖಾಲಿದ್ ಸಂಚು ರೂಪಿಸಿದ್ದ ಎಂಬ ಆರೋಪದ ಹಿನ್ನೆಲೆಯಲ್ಲಿ ಖಾಲಿದ್ನನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಲಾಗಿತ್ತು. ಖಾಲಿದ್ನ ಮೊಬೈಲ್ ಫೋನ್ ಅನ್ನು ಕೂಡಾ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.