ಹೈದರಾಬಾದ್: ಅಕ್ರಮವಾಗಿ ಮದ್ಯ ತಯಾರಿಸುತ್ತಿರುವವರ ಮೇಲೆ ನಡೆಸಿದ ದಾಳಿಯಲ್ಲಿ ಅಬಕಾರಿ ಇನ್ಸ್ಪೆಕ್ಟರ್ ಹಾಗೂ ಇಬ್ಬರು ಕಾನ್ಸ್ಟೆಬಲ್ಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ರಮ ಮದ್ಯ ಅಡ್ಡೆ ಮೇಲೆ ದಾಳಿ: ಅಬಕಾರಿ ಅಧಿಕಾರಿಗಳ ಮೇಲೆಯೇ ಹಲ್ಲೆ!
ಅಕ್ರಮ ಮದ್ಯ ತಯಾರಿಸುತ್ತಿರುವವರ ಮೇಲೆ ದಾಳಿ ನಡೆಸಿದಾಗ ಅಬಕಾರಿ ಅಧಿಕಾರಿಗಳು ಹಲ್ಲೆಗೊಳಗಾಗಿದ್ದಾರೆ.
excise
ತೆಲಂಗಾಣದ ಮೆಹಬೂಬ್ನಗರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. 'ಗುಡುಂಬಾ' ಎಂದೂ ಕರೆಯಲ್ಪಡುವ ಮದ್ಯವನ್ನು ಅಕ್ರಮವಾಗಿ ತಯಾರಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದ ಅಬಕಾರಿ ಅಧಿಕಾರಿಗಳು ಪರಿಶೀಲನೆಗಾಗಿ ತೆರಳಿದ್ದರು.
ಈ ವೇಳೆ ಮದ್ಯ ತಯಾರಿಸುತ್ತಿದ್ದವರು ಅಧಿಕಾರಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.