ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಮಧ್ಯೆ ನಮಗೆ ಸೂಕ್ತ ಸೌಲಭ್ಯ ಒದಗಿಸಿಲ್ಲ ಅಂತ ದೆಹಲಿಯ ರೋಹಿಣಿಯಲ್ಲಿರುವ ಅಂಬೇಡ್ಕರ್ ನಗರ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಕೇಜ್ರಿವಾಲ್ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಮಗೆ ಸೂಕ್ತ ಸೌಲಭ್ಯ ಒದಗಿಸಿಲ್ಲ: ಕೇಜ್ರಿವಾಲ್ ಸರ್ಕಾರದ ವಿರುದ್ಧ ವೈದ್ಯಕೀಯ ಸಿಬ್ಬಂದಿ ಆರೋಪ - ದೆಹಲಿ ಕೊರೊನಾ ನ್ಯೂಸ್
ನಮಗೆ ಕುಡಿಯಲು ನೀರು ಸಿಗುತ್ತಿಲ್ಲ, ಇತ್ತ ಆಹಾರವನ್ನೂ ನೀಡ್ತಿಲ್ಲ ಅಂತ ಅರವಿಂದ ಕೇಜ್ರಿವಾಲ್ ಸರ್ಕಾರದ ವಿರುದ್ಧ ದೆಹಲಿಯ ಆಸ್ಪತ್ರೆಯೊಂದರ ವೈದ್ಯಕೀಯ ಸಿಬ್ಬಂದಿ ಆರೋಪ ಮಾಡಿದ್ದಾರೆ.
ಕೇಜ್ರಿವಾಲ್ ಸರ್ಕಾರದ ವಿರುದ್ಧ ವೈದ್ಯಕೀಯ ಸಿಬ್ಬಂದಿ ಆರೋಪ
ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಿದ ಕಾರಣ ಅವರಿಂದ ತಮಗೂ ಸೋಂಕು ತಗುಲಿದೆ. ಆದರೆ ದೆಹಲಿ ಸರ್ಕಾರ ನಮಗೆ ಕನಿಷ್ಠ ಸೌಲಭ್ಯಗಳನ್ನು ಒದಗಿಸದೇ ನಿರ್ಲಕ್ಷ್ಯ ತೋರಿದೆ ಅಂತ ಆಸ್ಪತ್ರೆ ಸಿಬ್ಬಂದಿ ವಿಡಿಯೋ ಮಾಡಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ನಮಗೆ ಕುಡಿಯಲು ನೀರು ಸಿಗುತ್ತಿಲ್ಲ, ಇತ್ತ ಆಹಾರವೂ ಸಿಗುತ್ತಿಲ್ಲ, ಕೊರೊನಾ ರೋಗಿಗಳಿಗೆ ಸಿಗಬೇಕಾದ ಯಾವುದೇ ಸೌಲಭ್ಯವನ್ನೂ ಸರ್ಕಾರ ನೀಡಿಲ್ಲ ಎಂದು ಆರೋಪಿಸಿದ್ದಾರೆ.