ನವದೆಹಲಿ:ಕಳೆದ ತಿಂಗಳು ಚೀನಾದ ವಿಶೇಷ ಪ್ರತಿನಿಧಿಗಳು ಮತ್ತು ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ನಿರ್ಧರಿಸಿದಂತೆ ಪೂರ್ವ ಲಡಾಖ್‌ನಲ್ಲಿ ಸಂಪೂರ್ಣ ನಿಷ್ಕ್ರಿಯತೆ ಪಾಲಿಸಲು ಚೀನಾ ಭಾರತದೊಂದಿಗೆ ಪ್ರಾಮಾಣಿಕವಾಗಿ ಕೆಲಸ ಮಾಡಲಿದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.
ಶಾಂತಿ ಮರುಸ್ಥಾಪಿಸಲು ಚೀನಾ ಪ್ರಾಮಾಣಿಕ ಕೆಲಸ ಮಾಡುವ ನಿರೀಕ್ಷೆ: ಭಾರತದ ವಿಶ್ವಾಸ - ಪೂರ್ವ ಲಡಾಕ್‌ನ ಘರ್ಷಣೆ
ಪೂರ್ವ ಲಡಾಖ್‌ನಲ್ಲಿ ಸಂಪೂರ್ಣ ನಿಷ್ಕ್ರಿಯತೆ ಪಾಲಿಸಲು ಹಾಗೂ ದ್ವಿಪಕ್ಷೀಯ ಒಪ್ಪಂದ ಮತ್ತು ನಿಯಮಾವಳಿಗಳಿಗೆ ಅನುಗುಣವಾಗಿ ಶಾಂತಿ ಮರುಸ್ಥಾಪನೆಗೆ ಚೀನಾ ಪ್ರಾಮಾಣಿಕವಾಗಿ ಕೆಲಸ ಮಾಡಲಿದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ ಹೇಳಿದ್ದಾರೆ.
india china
ಪೂರ್ವ ಲಡಾಕ್‌ನ ಘರ್ಷಣೆಯ ಕುರಿತ ಪ್ರಶ್ನೆಗಳಿಗೆ ಅವರು ಉತ್ತರಿಸುತ್ತಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ಜುಲೈ 5ರಂದು ದೂರವಾಣಿ ಕರೆಯ ಮೂಲಕ ನಡೆಸಿದ ಮಾತುಕತೆಯಲ್ಲಿ ಎಲ್‌ಎಸಿ ಉದ್ದಕ್ಕೂ ಸೈನ್ಯದ ಸಂಪೂರ್ಣ ನಿಷ್ಕ್ರಿಯತೆ ಕುರಿತು ತೆಗೆದುಕೊಂಡ ನಿರ್ಧಾರಗಳನ್ನು ಉಲ್ಲೇಖಿಸಿದ್ದಾರೆ.
ದ್ವಿಪಕ್ಷೀಯ ಒಪ್ಪಂದ ಮತ್ತು ನಿಯಮಾವಳಿಗಳಿಗೆ ಅನುಗುಣವಾಗಿ ಶಾಂತಿ ಮರುಸ್ಥಾಪನೆಗೆ ಚೀನಾ ನಮ್ಮೊಂದಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ಅನುರಾಗ್ ಶ್ರೀವಾಸ್ತವ ಹೇಳಿದರು.
Last Updated : Aug 7, 2020, 10:20 AM IST