ಜಮ್ಮು-ಕಾಶ್ಮೀರ:ಇಲ್ಲಿನ ನಾಗ್ರೋಟಾದ ಬಾನ್ ಟೋಲ್ ಪ್ಲಾಜಾ ಬಳಿ ಲಾರಿಯೊಂದರಲ್ಲಿ ಪತ್ತೆಯಾದ ಭಾರೀ ಪ್ರಮಾಣದ ಸ್ಫೋಟಕವನ್ನು ಭದ್ರತಾ ಪಡೆ ಸಿಬ್ಬಂದಿಗಳು ನಿಷ್ಕ್ರಿಯಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಭಾರೀ ಸ್ಫೋಟಕ ನಿಷ್ಕ್ರಿಯಗೊಳಿಸಿದ ಭದ್ರತಾ ಪಡೆ: ನಾಲ್ವರು ಉಗ್ರರ ಬಂಧನ - ಸ್ಪೋಟಕ ನಿಷ್ಕ್ರಿಯ ಸುದ್ದಿ 2020
ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಭದ್ರತಾ ಸಿಬ್ಬಂದಿ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಲಾರಿಯೊಂದರಲ್ಲಿ ಪತ್ತೆಯಾದ ಸ್ಫೋಟಕವನ್ನು ಸಿಬ್ಬಂದಿಗಳು ನಿಷ್ಕ್ರಿಯಗೊಳಿಸಿದ್ದು, ನಾಲ್ವರು ಭಯೋತ್ಪಾದಕರನ್ನು ಸೆರೆಹಿಡಿಯಲಾಗಿದೆ.
ಸ್ಪೋಟಕ ನಿಷ್ಕ್ರಿಯಗೊಳಿಸಿದ ಭದ್ರತಾ ಪಡೆ
ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿಯೂ ನಡೆದಿದ್ದು, ನಾಲ್ವರು ಭಯೋತ್ಪಾದಕರನ್ನು ಸೆರೆಹಿಡಿಯಲಾಗಿದೆ. ಆದರೆ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಓರ್ವ ಪೊಲೀಸ್ ಕಾನ್ಸ್ಟೇಬಲ್ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.