ಶ್ರೀನಗರ :ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಉಗ್ರರು ಹೂತಿಟ್ಟಿದ್ದ ಸ್ಫೋಟಕವನ್ನು ಭದ್ರತಾ ಪಡೆಗಳು ಸೋಮವಾರ ಪತ್ತೆ ಹಚ್ಚಿ ನಿಷ್ಕ್ರಿಯಗೊಳಿಸಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪಟ್ಟನ್ ಪ್ರದೇಶದ ಶ್ರೀನಗರ-ಬಾರಾಮುಲ್ಲಾ ಹೆದ್ದಾರಿಯಲ್ಲಿ ಸೇನೆಯ ರೋಡ್ ಓಪನಿಂಗ್ ಪಾರ್ಟಿ (ಆರ್‌ಒಪಿ) ಸ್ಫೋಟಕ ಪತ್ತೆ ಹಚ್ಚಿದೆ. ಬಾಂಬ್ ಪತ್ತೆ ದಳದಿಂದ ಅದನ್ನು ನಿಷ್ಕ್ರಿಯಗೊಳಿಸಿ, ಆಗಬಹುದಾದ ದೊಡ್ಡ ಅನಾಹುತ ತಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.