ನವದೆಹಲಿ:ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ನ ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಂಟರ್‌ನೆಟ್ ಸ್ಥಗಿತಗೊಳ್ಳಲಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹರಿದಾಡುತ್ತಿದೆ ಎಂದು ಗೃಹ ಸಚಿವಾಲಯ ಬಹಿರಂಗಪಡಿಸಿದೆ.
ಲಡಾಖ್, ಕಾಶ್ಮೀರದಲ್ಲಿ ಇಂಟರ್‌ನೆಟ್ ಸ್ಥಗಿತಗೊಳ್ಳಲಿದೆ ಎಂದು ಶಾ ಹೇಳಿಲ್ಲ: ಗೃಹ ಸಚಿವಾಲಯ - ಸುಳ್ಳು ಸುದ್ದಿ
ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ನ ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಂಟರ್‌ನೆಟ್ ಸ್ಥಗಿತಗೊಳ್ಳಲಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ ಎಂಬ ಸುಳ್ಳು ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.
amit shah
ಗೃಹ ಸಚಿವ ಅಮಿತ್ ಶಾ ಹೆಸರಿನೊಂದಿಗೆ ಸುಳ್ಳು ಟ್ವೀಟ್ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗುತ್ತಿದೆ, ಆ ಟ್ವೀಟ್ನಲ್ಲಿ ಸಚಿವರು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ನಲ್ಲಿ ಸ್ಥಿರ ಲೈನ್ ಬ್ರಾಡ್‌ಬ್ಯಾಂಡ್ ಮತ್ತು ಇಂಟರ್‌ನೆಟ್ ತಡೆಹಿಡಿಯಲಾಗುವುದು ಎಂದು ಹೇಳಿದ್ದಾರೆ ಎನ್ನಲಾಗಿದೆ.
ಆದರೆ, ಈ ಟ್ವೀಟ್ ನಕಲಿ ಎಂದು ಗೃಹ ಸಚಿವಾಲಯ ಸ್ಪಷ್ಟಪಡಿಸಿದೆ. ಕೇಂದ್ರ ಗೃಹ ಸಚಿವರ ಟ್ವಿಟರ್ ಹ್ಯಾಂಡಲ್‌ನಿಂದ ಅಂತಹ ಯಾವುದೇ ಟ್ವೀಟ್ ಮಾಡಲಾಗಿಲ್ಲ" ಎಂದು ಗೃಹ ಸಚಿವಾಲಯದ ವಕ್ತಾರರು ಟ್ವೀಟ್ ಮಾಡಿ ಸ್ಟಷ್ಟನೆ ನೀಡಿದ್ದಾರೆ.