ಕರ್ನಾಟಕ

karnataka

ETV Bharat / bharat

ನಾಳೆ ಕೃಷಿ ಕಾನೂನು ಕುರಿತ 'ಸುಪ್ರೀಂ' ಸಮಿತಿಯ ಮೊದಲ ಸಭೆ - ದೆಹಲಿಯ ಪೂಸಾ ಕ್ಯಾಂಪಸ್‌

ಹೊಸ ಕೃಷಿ ಕಾನೂನುಗಳ ಬಗ್ಗೆ ಪರಿಶೀಲಿಸಲು ಸುಪ್ರೀಂಕೋರ್ಟ್ ರಚಿಸಿರುವ ಸಮಿತಿಯ ಮೊದಲ ಸಭೆ ಇಂದು ದೆಹಲಿಯ ಪೂಸಾ ಕ್ಯಾಂಪಸ್‌ನಲ್ಲಿ ನಡೆಯಲಿದೆ.

delhi
'ಸುಪ್ರೀಂ' ಸಮಿತಿಯ ಮೊದಲ ಸಭೆ

By

Published : Jan 18, 2021, 8:56 AM IST

Updated : Jan 18, 2021, 9:47 AM IST

ನವದೆಹಲಿ:ಹೊಸ ಕೃಷಿ ಕಾನೂನುಗಳ ಕುರಿತು ಸುಪ್ರೀಂಕೋರ್ಟ್ ರಚಿಸಿರುವ ಸಮಿತಿ ತನ್ನ ಮೊದಲ ಸಭೆಯನ್ನು ದೆಹಲಿಯ ಪೂಸಾ ಕ್ಯಾಂಪಸ್‌ನಲ್ಲಿ ನಡೆಸಲಿದೆ.

ಸಮಿತಿಯ ಸದಸ್ಯರಲ್ಲೊಬ್ಬರಾದ ಅನಿಲ್ ಘನ್ವಾತ್ ಭಾನುವಾರ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಜನವರಿ 11 ರಂದು ಮುಂದಿನ ಆದೇಶದವರೆಗೆ ಕೇಂದ್ರದ ಮೂರು ಹೊಸ ಕೃಷಿ ಕಾನೂನುಗಳ ಅನುಷ್ಠಾನವನ್ನು ಸುಪ್ರೀಂಕೋರ್ಟ್ ತಡೆಹಿಡಿದಿತ್ತು. ಅಲ್ಲದೇ, ಸುಪ್ರೀಂಕೋರ್ಟ್ ನಾಲ್ಕು ಸದಸ್ಯರ ಸಮಿತಿಯನ್ನು ನೇಮಿಸಿತ್ತು. ಆದರೆ, ಭಾರತೀಯ ಕಿಸಾನ್ ಒಕ್ಕೂಟದ ಅಧ್ಯಕ್ಷ ಭೂಪೇಂದ್ರ ಸಿಂಗ್ ಮನ್ ಕಳೆದ ವಾರ ಸಮಿತಿಯಿಂದ ಬೇರ್ಪಟ್ಟಿದ್ದಾರೆ. ಘನ್ವತ್ ಅವರಲ್ಲದೇ, ಕೃಷಿ ಅರ್ಥಶಾಸ್ತ್ರಜ್ಞರಾದ ಅಶೋಕ್ ಗುಲಾಟಿ ಮತ್ತು ಪ್ರಮೋದ್ ಕುಮಾರ್ ಜೋಶಿ ಅವರು ಸಮಿತಿಯ ಇತರ ಇಬ್ಬರು ಸದಸ್ಯರು.

ಇದನ್ನೂ ಓದಿ: ಸದ್ದು ಮಾಡಿದ ಖಾಕಿ ಪಿಸ್ತೂಲ್: ಬೆಂಗಳೂರಲ್ಲಿ ರೌಡಿಶೀಟರ್ ಕಾಲಿಗೆ‌ ಗುಂಡು
ಈ ಸಂಬಂಧ ಶಟ್ಕರಿ ಸಂಸ್ಥೆ (ಮಹಾರಾಷ್ಟ್ರ) ಮುಖ್ಯಸ್ಥ ಘನ್ವತ್ ಮಾತನಾಡಿ, 'ನಾವು ಜನವರಿ 19 ರಂದು ಪೂಸಾ ಕ್ಯಾಂಪಸ್‌ನಲ್ಲಿ ಸಭೆ ನಡೆಸುತ್ತಿದ್ದೇವೆ. ಭವಿಷ್ಯದ ಕಾರ್ಯತಂತ್ರವನ್ನು ನಿರ್ಧರಿಸಲು ಸದಸ್ಯರು ಮಾತ್ರ ಸಭೆಯಲ್ಲಿ ಪಾಲ್ಗೊಳ್ಳುತ್ತಾರೆ. ಇದಕ್ಕೂ ಮುನ್ನ, ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತ ಸಂಘಗಳು ಭಾನುವಾರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ದೆಹಲಿಯಲ್ಲಿ ತಮ್ಮ ಉದ್ದೇಶಿತ ಟ್ರ್ಯಾಕ್ಟರ್ ಪರೇಡ್ ಅನ್ನು ಕೈಗೊಳ್ಳುವುದಾಗಿ ತಿಳಿಸಿವೆ. ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಆಚರಣೆಯಲ್ಲಿ ಯಾವುದೇ ಅಡೆತಡೆಗಳು ಉಂಟಾಗದಂತೆ, ಪ್ರಸ್ತಾವಿತ ಟ್ರ್ಯಾಕ್ಟರ್ ಮೆರವಣಿಗೆ ಅಥವಾ ರೈತರು ನಡೆಸುವ ಇಂತಹ ಯಾವುದೇ ಪ್ರತಿಭಟನೆಗೆ ತಡೆ ನೀಡುವಂತೆ ಅಧಿಕಾರಿಗಳು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದಾರೆ.

ಜನವರಿ 26 ರಂದು ದೆಹಲಿಯ ಹೊರವಲಯದ ರಿಂಗ್ ರಸ್ತೆಯಲ್ಲಿ ಪ್ರತಿಭಟನಾನಿರತ ರೈತರು ಟ್ರ್ಯಾಕ್ಟರ್ ಪರೇಡ್ ನಡೆಸಲಿದ್ದಾರೆ ಎಂದು ರೈತ ಸಂಘದ ಯೋಗೇಂದ್ರ ಯಾದವ್ ರೈತ ಸಂಘ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದೆ.

Last Updated : Jan 18, 2021, 9:47 AM IST

ABOUT THE AUTHOR

...view details