ನವದೆಹಲಿ:ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ರೈತರು ದೆಹಲಿ ಗಡಿಯಲ್ಲಿ ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ರಾಷ್ಟ್ರ ರಾಜಧಾನಿ ಗಡಿಯಲ್ಲಿ ನಿಯೋಜಿಸಲಾದ ಹೆಚ್ಚುವರಿ ಪೊಲೀಸ್ ಪಡೆಗಳನ್ನು ದೆಹಲಿ ಪೊಲೀಸರು ಸೋಮವಾರ ಹಿಂತೆಗೆದುಕೊಂಡಿದ್ದಾರೆ.
ದೆಹಲಿ ಹಿಂಸಾಚಾರ ವೇಳೆ ನೇಮಿಸಿದ್ದ ಹೆಚ್ಚುವರಿ ಪೊಲೀಸ್ ಭದ್ರತೆ ಹಿಂತೆಗೆತ - ನವದೆಹಲಿ 2021
ಜನವರಿ 26ರಂದು ರೈತರ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ನಡೆದ ಹಿಂಸಾಚಾರದ ನಂತರ ದೆಹಲಿ ಗಡಿಯಲ್ಲಿ ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿತ್ತು..
ರೈತ ಪ್ರತಿಭಟನೆ
ದೆಹಲಿ ಪೊಲೀಸರ ಆಂತರಿಕ ಸಂವಹನದ ಮಾಹಿತಿ ಪ್ರಕಾರ, ಹೆಚ್ಚುವರಿ ಪಡೆಗಳನ್ನು ಆಯಾ ಘಟಕಗಳು ಮತ್ತು ಜಿಲ್ಲೆಗಳಿಂದ ಹಿಂತೆಗೆದುಕೊಳ್ಳಬೇಕು ಎಂದು ಹೇಳಲಾಗಿದೆ.
ಜನವರಿ 26ರಂದು ರೈತರ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ನಡೆದ ಹಿಂಸಾಚಾರದ ನಂತರ ದೆಹಲಿ ಗಡಿಯಲ್ಲಿ ಹೆಚ್ಚು ಪೊಲೀಸರನ್ನ ನಿಯೋಜಿಸಲಾಗಿತ್ತು.