ಕರ್ನಾಟಕ

karnataka

ETV Bharat / bharat

ಕೃಷಿ ಕಾಯ್ದೆಗಳ ಬಗ್ಗೆ ತಪ್ಪುಗ್ರಹಿಕೆ ಇರುವುದರಿಂದ ರೈತರು ಪ್ರತಿಭಟಿಸುತ್ತಿದ್ದಾರೆ: ಬಿಹಾರ ಸಿಎಂ ನಿತೀಶ್ ಕುಮಾರ್​ - ದೆಹಲಿಯಲ್ಲಿ ರೈತರ ಪ್ರತಿಭಟನೆ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸುಮಾರು 32 ರೈತ ಸಂಘಟನೆಗಳು ಪಾಲ್ಗೊಂಡಿವೆ. ಇದರಲ್ಲಿ ಹೆಚ್ಚಾಗಿ ಪಂಜಾಬ್‌ ರಾಜ್ಯದವರಾಗಿದ್ದರೆ, ಗುಜರಾತ್ ಮತ್ತು ಮಹಾರಾಷ್ಟ್ರದ ಕೆಲವು ರೈತರು ಶುಕ್ರವಾರ ದೆಹಲಿಯನ್ನು ತಲುಪಿದ್ದು ಪ್ರತಿಭಟನೆಗೆ ಕೈಜೋಡಿಸಿದ್ದಾರೆ.

By

Published : Nov 30, 2020, 10:54 PM IST

ಪಾಟ್ನಾ: ತಪ್ಪು ಕಲ್ಪನೆಗಳಿಂದ ರೈತರು ಪ್ರತಿಭಟನೆ ಹಾದಿ ಹಿಡಿದಿದ್ದಾರೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ಹೇಳಿದ್ದು, ಈ ಸಂದರ್ಭದಲ್ಲಿ ಸಂವಾದಗಳು ನಡೆದರೆ ಉತ್ತಮ ಎಂದು ಎಂದು ಸಲಹೆ ನೀಡಿದ್ದಾರೆ.

" ಬೆಳೆಗಳ ಖರೀದಿ ಕಾರ್ಯ ವಿಧಾನದಲ್ಲಿನ ರೈತರಿಗಿರುವ ಸಮಸ್ಯೆಗಳ ಭಯವನ್ನು ಹೋಗಲಾಡಿಸಲು ಕೇಂದ್ರ ಸರ್ಕಾರ ರೈತ ಸಂಘಟನೆಗಳೊಂದಿಗೆ ಮಾತನಾಡಲು ಬಯಸಿದೆ. ಆದ್ದರಿಂದ ಇಬ್ಬರ ನಡುವೆ ಮಾತುಕತೆ ನಡೆಯಬೇಕು ಎಂದು ನಾನು ಬಯಸುತ್ತೇನೆ. ಪ್ರಸ್ತುತ ಕಾಯ್ದೆಗಳ ಬಗ್ಗೆ ತಪ್ಪು ಗ್ರಹಿಕೆಗಳ ಕಾರಣದಿಂದ ಪ್ರತಿಭಟನೆಗಳು ನಡೆಯುತ್ತಿವೆ" ಎಂದು ಕುಮಾರ್ ಅಭಿಪ್ರಾಯಪಟ್ಟಿದ್ದಾರೆ..

ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ಕೃಷಿ ಕಾನೂನನ್ನು ಹಿಂತೆಗೆದುಕೊಳ್ಳುವಂತೆ ಪಂಜಾಬ್ ಮತ್ತು ಹರಿಯಾಣದ ಸೇರಿದಂತೆ ಹಲವು ರಾಜ್ಯಗಳ ರೈತರು ದೆಹಲಿಯನ್ನು ಮೂರುನ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಕೇಂದ್ರ ಸರ್ಕಾರ ರೈತರೊಂದಿಗೆ ಮಾತುಕತೆಗೆ ಕೇಂದ್ರ ಸಿದ್ದವಾಗಿದೆ ಎಂದು ತಿಳಿಸಿದೆ. ಆದರೆ ಇದಕ್ಕೆ ಕೆಲವು ನಿಬಂಧನೆಗಳನ್ನು ಏರಿರುವುದು ತಮಗೆ ಅವಮಾನ ಎಂದು ಹೇಳುವ ಮೂಲಕ ಡಿಸೆಂಬರ್ 3 ರಂದು ಮಾತುಕತೆ ನಡೆಸುವ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ರೈತ ಸಂಘಟನೆಗಳು ತಿರಸ್ಕರಿಸಿದ್ದಾರೆ.

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸುಮಾರು 32 ರೈತ ಸಂಘಟನೆಗಳು ಪಾಲ್ಗೊಂಡಿವೆ. ಇದರಲ್ಲಿ ಹೆಚ್ಚಾಗಿ ಪಂಜಾಬ್‌ ರಾಜ್ಯದವರಾಗಿದ್ದರೆ, ಗುಜರಾತ್ ಮತ್ತು ಮಹಾರಾಷ್ಟ್ರದ ಕೆಲವು ರೈತರು ಶುಕ್ರವಾರ ದೆಹಲಿಯನ್ನು ತಲುಪಿದ್ದು ಪ್ರತಿಭಟನೆಗೆ ಕೈಜೋಡಿಸಿದ್ದಾರೆ.

ಶನಿವಾರ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಡಿಸೆಂಬರ್ 3 ರಂದು ರೈತ ಸಂಘಗಳೊಂದಿಗೆ ಮಾತುಕತೆಗೆ ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ABOUT THE AUTHOR

...view details