ಮಲಪ್ಪುರಂ(ಕೇರಳ): ಪಾಪಿ ತಂದೆಯೋರ್ವ ತನ್ನ ನಾಲ್ವರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಕೇರಳದ ಮಲಪ್ಪುರಂನಲ್ಲಿ ನಡೆದಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ.
ನಾಲ್ವರು ಹೆಣ್ಣುಮಕ್ಕಳ ಮೇಲೆ ತಂದೆಯಿಂದ ಲೈಂಗಿಕ ದೌರ್ಜನ್ಯ: ಶಿಕ್ಷಕಿಯೆದುರು ವಿಷ್ಯ ಬಹಿರಂಗ! - ತಂದೆಯಿಂದ ಲೈಂಗಿಕ ದೌರ್ಜನ್ಯ
ಪಾಪಿ ತಂದೆಯೋರ್ವ ಕಳೆದ ಕೆಲ ತಿಂಗಳಿಂದ ತನ್ನ ನಾಲ್ವರು ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ನಡೆದಿದೆ.
Father arrested for sexually abusing four daughters
17,15,13 ಹಾಗೂ 10 ವರ್ಷದ ಹೆಣ್ಣು ಮಕ್ಕಳ ಮೇಲೆ ಕಳೆದ ಕೆಲ ತಿಂಗಳಿಂದ ನಿರಂತರವಾಗಿ ತಂದೆ ಈ ಕೃತ್ಯವೆಸಗಿದ್ದಾನೆ. 10 ವರ್ಷದ ಬಾಲಕಿ ಘಟನೆಗೆ ಸಂಬಂಧಿಸಿದಂತೆ ಶಾಲೆಯಲ್ಲಿ ಶಿಕ್ಷಕಿ ಮುಂದೆ ಹೇಳಿಕೊಂಡಾಗ ಈ ಪ್ರಕರಣ ಬೆಳಕಿಗೆ ಬಂದಿದೆ.
ಶಾಲೆಯ ಆಡಳಿತ ಮಂಡಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ 47 ವರ್ಷದ ವ್ಯಕ್ತಿಯನ್ನ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾಗಿ ತಿಳಿಸಿದ್ದಾರೆ. ಇನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹ ಪ್ರಕರಣದ ವಿಚಾರಣೆ ನಡೆಸಲು ಮುಂದಾಗಿದೆ.