ರಂಗಾರೆಡ್ಡಿ (ತೆಲಂಗಾಣ): ಪಶುವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ಕೋರಿ ಶಾದ್ನಗರ ಪೊಲೀಸರು ರಂಗಾರೆಡ್ಡಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ನ. 28 ರಂದು ಹೈದರಾಬಾದ್ನ ಪಶುವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು, ಬಳಿಕ ಆಕೆಯ ದೇಹವನ್ನು ಸುಟ್ಟು ಕೊಲೆ ಮಾಡಿದ್ದರು. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಸೈಬರಾಬಾದ್ ಪೊಲೀಸರು ಬಂಧಿಸಿದ್ದರು. ಬಳಿಕ ರಂಗಾರೆಡ್ಡಿ ಕೋರ್ಟ್, 14 ದಿನಗಳ ಕಾಲ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇದೀಗ ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ಶಾದ್ನಗರ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಅಲ್ಲದೇ ಅಪರಾಧ ಸಂಬಂಧ FIR ದಾಖಲಿಸುವಲ್ಲಿ ವಿಳಂಬ ಮಾಡಿದ ಆರೋಪದ ಮೇಲೆ ಮೂವರು ಪೊಲೀಸರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.