ಭೋಪಾಲ್(ಮಧ್ಯಪ್ರದೇಶ): ಫೇಕ್ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ ಕಾಂಗ್ರೆಸ್ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಭೋಪಾಲ್ ಕ್ರೈಮ್ ಬ್ರಾಂಚ್ ಎಫ್ಐಆರ್ ದಾಖಲಿಸಿದ್ದು, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿದೆ.