ಸಂಭಾಲ್ (ಉತ್ತರ ಪ್ರದೇಶ) : ಜಿಲ್ಲೆಯಲ್ಲಿ ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆಗಳು ಹಿಂಸಾತ್ಮಕವಾಗುತ್ತಿರುವ ಕಾರಣ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡರೂ ಸೇರಿದಂತೆ ಒಟ್ಟು 17 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಪೌರತ್ವ ಪ್ರತಿಭಟನೆ: ಎಸ್‌ಪಿ ಮುಖಂಡರೂ ಸೇರಿ 17 ಜನರ ವಿರುದ್ಧ ಪ್ರಕರಣ - ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ
ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆಗಳು ಹಿಂಸಾತ್ಮಕವಾಗುತ್ತಿರುವ ಕಾರಣ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡರು ಸೇರಿದಂತೆ 17 ಜನರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ
ನಿನ್ನೆ ಪ್ರತಿಭಟನೆ ವೇಳೆ ರಾಜ್ಯ ಸಾರಿಗೆ ಬಸ್‌ಗೆ ಬೆಂಕಿ ಹಚ್ಚಲಾಗಿತ್ತು. ಈ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಸಂಸದ ಶಫಿಕೂರ್ ರಹಮಾನ್ ಬಾರ್ಕ್ ಮತ್ತು ಫಿರೋಜ್ ಖಾನ್ ಸೇರಿದಂತೆ ಹಲವರ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ನಿಷೇಧಾಜ್ಞೆ (ಸೆಕ್ಷನ್ -144) ಜಾರಿಗೊಳಿಸಲಾಗಿದೆ.