ನವದೆಹಲಿ:ಆಗ್ನೇಯ ದೆಹಲಿಯಲ್ಲಿ ಎರಡು ಪ್ರತ್ಯೇಕ ಅಗ್ನಿ ಅವಘಡಗಳು ಸಂಭವಿಸಿವೆ. ತುಘಲಕಾಬಾದ್ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸುಮಾರು 250 ಗುಡಿಸಲುಗಳು ಸುಟ್ಟುಹೋಗಿವೆ.
ಮಧ್ಯರಾತ್ರಿ 12.50 ಕ್ಕೆ ಈ ಅವಘಡಕ್ಕೆ ಸಂಬಂಧಿಸಿದಂತೆ ನಮಗೆ ಕರೆ ಬಂದಿದ್ದು, 28 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದ್ದು, ಮುಂಜಾನೆ 3.30ರ ವೇಳೆಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಹೇಳಿದ್ದಾರೆ.
ಮತ್ತೊಂದೆಡೆ ಕೇಶವ್‌ಪುರಂ ಪ್ರದೇಶದಲ್ಲಿರುವ ಶೂ ಕಾರ್ಖಾನೆಯಲ್ಲೂ ಭಾರಿ ಅಗ್ನಿ ಅವಘಡ ಸಂಭವಿಸಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.
ಫುಟ್ವೇರ್ ಕಾರ್ಖಾನೆಯಲ್ಲಿ ಬೆಂಕಿ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿ ತಿಳಿಸಿದ್ದು, ಬೆಂಕಿಯ ಹಿಂದಿನ ಕಾರಣವನ್ನು ಪತ್ತೆ ಹಚ್ಚಲಾಗುತ್ತಿದೆ ಎಂದಿದ್ದಾರೆ.
ಬೆಳಗ್ಗೆ 8.34 ಕ್ಕೆ ಬೆಂಕಿ ತಗುಲಿರುವ ಬಗ್ಗೆ ಕರೆ ಬಂದಿದ್ದು, 23 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ ನಿರ್ದೇಶಕ ಅತುಲ್ ಗರ್ಗ್ ಮಾಹಿತಿ ನೀಡಿದ್ದಾರೆ.